ನವದೆಹಲಿ: ದೇಶದಲ್ಲಿ ಕೊರೋನಾ ವೈರಾಣು ಮತ್ತಷ್ಟು ಕಡಿಮೆಯಾಗುತ್ತಿದೆ. ಇಂದು ಶನಿವಾರ ಬೆಳಗ್ಗೆ 8 ಗಂಟೆಗೆ ಮುಕ್ತಾಯಗೊಂಡ 24 ಗಂಟೆಗಳ ಅವಧಿಯಲ್ಲಿ 11 ಸಾವಿರದ 850 ಮಂದಿಯಲ್ಲಿ ಕೊರೋನಾ ಪ್ರಕರಣಗಳು ದೃಢಪಟ್ಟಿದೆ. ಹಾಗೆಯೇ 555 ಮಂದಿ ಮೃತಪಟ್ಟಿದ್ದಾರೆ.
ದೇಶದಲ್ಲಿ 1 ಲಕ್ಷದ 36 ಸಾವಿರದ 308 ಸಕ್ರಿಯ ಕೊರೋನ ಪ್ರಕರಣ ಇದೆ. ಕಳೆದ 274 ದಿನಗಳಲ್ಲಿಯೇ ಇದು ಅತ್ಯಂತ ಕಡಿಮೆ ಪ್ರಕರಣ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಒದಗಿಸಿದೆ.
ಕಳೆದ 24 ಗಂಟೆಗಳಲ್ಲಿ 12 ಸಾವಿರದ 403 ಮಂದಿ ಕೊರೋನಾದಿಂದ ಗುಣಮುಖರಾಗಿದ್ದಾರೆ. ಇಲ್ಲಿಯವರೆಗೆ ಸೋಂಕಿನಿಂದ ದೇಶದಲ್ಲಿ ಗುಣಮುಖ ಹೊಂದಿದವರ ಸಂಖ್ಯೆ 3 ಕೋಟಿಯ 38 ಲಕ್ಷದ 26 ಸಾವಿರದ 483. ಒಟ್ಟು ಪ್ರಕರಣಗಿಂತ ಸಕ್ರಿಯ ರೋಗಿಗಳ ಸಂಖ್ಯೆ ಶೇಕಡಾ 1ಕ್ಕಿಂತ ಕಡಿಮೆಯಿದೆ. ಪ್ರಸ್ತುತ ಸಕ್ರಿಯ ರೋಗಿಗಳ ಪ್ರಮಾಣ ಶೇಕಡಾ 0.40ರಷ್ಟಿದೆ. ಕಳೆದ ವರ್ಷ ಮಾರ್ಚ್ ನಿಂದ ಇಲ್ಲಿಯವರೆಗೆ ಅತಿ ಕಡಿಮೆಯಾಗಿದೆ.
ಗುಣಮುಖ ಹೊಂದಿರುವವರ ಪ್ರಮಾಣ ಶೇಕಡಾ 98.26% ಏರಿಕೆ ಕಂಡಿದೆ. ಕಳೆದ ವರ್ಷ ಮಾರ್ಚ್ 2020ರ ನಂತರ ಗುಣಮುಖ ಹೊಂದುತ್ತಿರುವವರ ಸಂಖ್ಯೆಯಲ್ಲಿ ಇದು ಅತ್ಯಧಿಕವಾಗಿದೆ. ಕೇಂದ್ರ ಸರ್ಕಾರವು ಮಾಹಿತಿ ಕೊಟ್ಟಿರುವ ಪ್ರಕಾರ ಕೊರೋನಾ ಮಹಾಮಾರಿಯ ವಿರುದ್ಧ ಹೋರಾಡಲು ಜನರಿಗೆ ನೀಡುವ ಲಸಿಕೆ ಅಭಿಯಾನವು ಶುರುವಾಗಿ ಇಲ್ಲಿಯ ತನಕ ಒಟ್ಟು 111.40 ಕೋಟಿ ಜನರಿಗೆ ಲಸಿಕೆಯನ್ನು ನೀಡಲಾಗಿದೆ ಎಂಬುದಾಗಿ ತಿಳಿಸಿದೆ.
ಆರೋಗ್ಯ ಇಲಾಖೆಯಿಂದ ರಾಜ್ಯಗಳಿಗೆ ಹಣ ಬಿಡುಗಡೆ:
15ನೇ ಹಣಕಾಸು ಆಯೋಗದ ಶಿಫಾರಸ್ಸಿನ ಅನುಸಾರ 19 ರಾಜ್ಯಗಳಲ್ಲಿನ ಸ್ಥಳೀಯ ಸಂಸ್ಥೆಗಳಿಗೆ ಆರೋಗ್ಯ ಇಲಾಖೆಯು 8 ಸಾವಿರದ 453.92 ಕೋಟಿ ರೂಪಾಯಿ ಅನುದಾನವನ್ನು ಬಿಡುಗಡೆಗೊಳಿಸಿದೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments