ಇನ್ನು ಮುಂದೆ ಎಲ್.ಪಿ.ಜಿ ಗ್ರಾಹಕರಿಗೆ ಗುಡ್ ನ್ಯೂಸ್

Ad Code

ಇನ್ನು ಮುಂದೆ ಎಲ್.ಪಿ.ಜಿ ಗ್ರಾಹಕರಿಗೆ ಗುಡ್ ನ್ಯೂಸ್


 

ಹೊಸದಿಲ್ಲಿ: ದೇಶದಲ್ಲಿ ಹೆಚ್ಚುತ್ತಿರುವ ಹಣದುಬ್ಬರ ಜನಸಾಮಾನ್ಯರನ್ನು ಬೆಚ್ಚಿ ಬೀಳಿಸಿದೆ. ಅಗತ್ಯ ವಸ್ತುಗಳ ಬೆಲೆಯೊಂದಿಗೆ ಪೆಟ್ರೋಲ್, ಡೀಸೆಲ್ ಬೆಲೆ ಕೂಡ ಭಾರೀ ಪ್ರಮಾಣದಲ್ಲಿ ಏರಿಕೆಯಾಗಿದೆ. ಅಷ್ಟೇ ಅಲ್ಲದೆ ಗ್ಯಾಸ್ ಬೆಲೆ ಸಾರ್ವಕಾಲಿಕ ಗರಿಷ್ಠ 900 ರೂ.ಗೆ ಏರಿಕೆಯಾಗಿದೆ. ಈ ಮೊತ್ತದಲ್ಲಿ ಜನರಿಗೆ ಗ್ಯಾಸ್ ಸಿಲಿಂಡರ್ ಖರೀದಿಸುವುದು ಹೊರೆಯಾಗಿ ಪರಿಣಮಿಸಿದೆ. ಆದ್ದರಿಂದ ಕೇಂದ್ರ ಸರ್ಕಾರ ಗ್ಯಾಸ್ ಸಬ್ಸಿಡಿ ಪುನಶ್ಚೇತನಕ್ಕೆ ಚಿಂತನೆ ನಡೆಸಿದೆ.


ತೈಲ ಮಾರುಕಟ್ಟೆ ಕಂಪನಿಗಳು ಕೇಂದ್ರ ಸರ್ಕಾರದ ನಿರ್ದೇಶನದಂತೆ ಗ್ಯಾಸ್ ಡೀಲರ್ ಗಳಿಗೆ 303 ರೂಪಾಯಿ ಸಬ್ಸಿಡಿ ನೀಡುತ್ತದೆ. ಇದರೊಂದಿಗೆ ಗೃಹಬಳಕೆಯ ಗ್ಯಾಸ್ ಸಿಲಿಂಡರ್ 303 ರೂಪಾಯಿಗಳ ರಿಯಾಯಿತಿ ನೀಡಲಿವೆ.


ಈ ಮೂಲಕ ಇದೀಗ ಗ್ಯಾಸ್ ಸಿಲಿಂಡರ್ 587 ರೂಪಾಯಿಗೆ ಲಭ್ಯವಿರುತ್ತದೆ ಎಂಬ ಸಿಹಿಸುದ್ದಿಯನ್ನು ಕೇಂದ್ರ ಸರ್ಕಾರ ಎಲ್.ಪಿ.ಜಿ ಗ್ರಾಹಕರಿಗೆ ನೀಡಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments