ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ ನರೇಂದ್ರ ಮೋದಿ

Ad Code

ಮತ್ತೊಮ್ಮೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ ನರೇಂದ್ರ ಮೋದಿ



ನವದೆಹಲಿ: ವಿಶ್ವದ 13 ರಾಷ್ಟ್ರಗಳ ಮುಖ್ಯಸ್ಥರ ಪಟ್ಟಿಯಲ್ಲಿ ಪ್ರಧಾನಿ ಮೋದಿ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ. ನರೇಂದ್ರ ಮೋದಿಯವರು ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎಂದು ಅಮೆರಿಕದ ಸಂಸ್ಥೆಗಳ ಸಮೀಕ್ಷೆಯು ಸಾಬೀತು ಮಾಡಿದೆ.


ಕೋವಿಡ್‌ನ ಎರಡನೇ ಅಲೆಯ ಸಂದರ್ಭದಲ್ಲಿ ಕುಸಿದಿದ್ದ ಮೋದಿಯವರ ರೇಟಿಂಗ್ ಇದೀಗ ಮತ್ತೆ ಏರಿಕೆ ಕಂಡಿದೆ. ಅಮೇರಿಕನ್ ಡೇಟಾ ಇಂಟೆಲಿಜೆನ್ಸ್ ಸಂಸ್ಥೆ 'ದಿ ಮಾರ್ನಿಂಗ್ ಕನ್ಸಲ್ಟ್' ಈ ಸಮೀಕ್ಷೆಯನ್ನು ನಡೆಸಿತ್ತು. ಇದರ ಪ್ರಕಾರ ಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತೆ ವಿಶ್ವದ ಅತ್ಯಂತ ಜನಪ್ರಿಯ ನಾಯಕರಾಗಿ ಹೊರಹೊಮ್ಮಿದ್ದಾರೆ.


ಅಮೆರಿಕದ ಸಂಸ್ಥೆಗಳು ನಡೆಸಿದ ಸಮೀಕ್ಷೆಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು 70% ರಷ್ಟು ರೇಟಿಂಗ್ ಪಡೆದಿದ್ದಾರೆ. ವಿಶ್ವದ ಅತ್ಯಂತ ಜನಪ್ರಿಯ ನಾಯಕ ಎನಿಸಿಕೊಂಡಿದ್ದಾರೆ. ಇದು ಮೋದಿ ಅಭಿಮಾನಿಗಳಲ್ಲಿ ಸಂತಸವನ್ನು ಹೆಚ್ಚಿಸಿದೆ.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments