ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭರವಸೆ ನೀಡಿದ ಮೋದಿ

Ad Code

ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಭರವಸೆ ನೀಡಿದ ಮೋದಿ


 

ಹೊಸದಿಲ್ಲಿ: ಕಳೆದ ಹಲವು ತಿಂಗಳಿನಿಂದ ತೀವ್ರ ಪ್ರತಿಭಟನೆಗೆ ಕಾರಣವಾಗಿದ್ದ ವಿವಾದಾತ್ಮಕ ಮೂರು ಕೃಷಿ ಕಾನೂನುಗಳನ್ನು ಕೇಂದ್ರ ಸರಕಾರವು ರದ್ದು ಮಾಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿಯವರು ಶುಕ್ರವಾರ ಘೋಷಣೆ ಮಾಡಿದ್ದಾರೆ.


ಈ ಕೃಷಿ ಕಾನೂನುಗಳ ಬಗ್ಗೆ ರೈತರ ಒಂದು ವರ್ಗಕ್ಕೆ ಅದರ ಮಹತ್ವವನ್ನು ಮನವರಿಕೆ ಮಾಡಿಸುವಲ್ಲಿ ಸರ್ಕಾರವು ವಿಫಲಗೊಂಡಿದೆ ಎಂಬುದನ್ನು ಪ್ರಧಾನಿ ನರೇಂದ್ರ ಮೋದಿ ಒಪ್ಪಿಕೊಂಡರು. ಇದೇ ತಿಂಗಳ ಸಂಸತ್ ಅಧಿವೇಶನದಲ್ಲಿ ಮೂರು ವಿವಾದಾತ್ಮಕ ಕೃಷಿ ಕಾನೂನುಗಳನ್ನು ರದ್ದು ಮಾಡಲಾಗುವುದು ಎಂದು ಅವರು ಹೇಳಿದರು.


”ಸತ್ಯ ಮತ್ತು ಶುದ್ಧವಾದ ಹೃದಯದಿಂದ ನಾನು ಭಾರತಕ್ಕೆ ಕ್ಷಮೆಯನ್ನು ಯಾಚಿಸುತ್ತೇನೆ. ರೈತರಿಗೆ ಕೃಷಿ ಕಾನೂನುಗಳ ಬಗ್ಗೆ ಅರಿವನ್ನು ಮೂಡಿಸಲು ನಮಗೆ ಅಸಾಧ್ಯವಾಯಿತು. ಹೀಗಾಗಿ ನಾವು ಈ ಮೂರು ಕೃಷಿ ಕಾನೂನುಗಳನ್ನು ರದ್ದುಗೊಳಿಸಲು ನಿರ್ಧಾರ ಮಾಡಿದ್ದೇವೆ. ಈ ತಿಂಗಳಿನಲ್ಲಿ ಆರಂಭಗೊಳ್ಳುವ ಸಂಸತ್ತಿನ ಅಧಿವೇಶನದಲ್ಲಿ ನಾವು ಈ ಕುರಿತಾದ ಎಲ್ಲಾ ವಿಧಿವಿಧಾನಗಳನ್ನು ಸಂಪೂರ್ಣಗೊಳಿಸುತ್ತೇವೆ" ಎಂದು ಪ್ರಧಾನಿ ಮೋದಿ ಶುಕ್ರವಾರ ದೇಶವನ್ನು ಉದ್ದೇಶಿಸಿ ಮಾಡಿದ ಭಾಷಣದಲ್ಲಿ ತಿಳಿಸಿದರು.


''ನಾನೇನು ಮಾಡಿದ್ದೇನೋ ಅದೆಲ್ಲವನ್ನೂ ನಾನು ನಮ್ಮ ದೇಶದ ರೈತರಿಗಾಗಿ ಮಾಡಿದ್ದೇನೆ. ನಾನು ಮಾಡುತ್ತಿರುವುದು ದೇಶಕ್ಕೋಸ್ಕರ. ನಿಮ್ಮೆಲ್ಲರ ಆಶೀರ್ವಾದದಿಂದಾಗಿ ನಾನು ನನ್ನ ಶ್ರಮದಲ್ಲಿ ಏನನ್ನೂ ಕೂಡಾ ಕಡಿಮೆ ಮಾಡಲಿಲ್ಲ. ಇಂದು ನಿಮಗೆ ನಾನು ಭರವಸೆಯನ್ನು ನೀಡುತ್ತೇನೆ. ನಾನು ಇನ್ನಷ್ಟು ಶ್ರಮಿಸುತ್ತೇನೆ‌ ಆದ್ದರಿಂದ ನಿಮ್ಮ ಕನಸುಗಳನ್ನು ಹಾಗೂ ದೇಶದ ಕನಸುಗಳನ್ನು ನನಸು ಮಾಡಬಹುದು'' ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.


(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments