ನವದೆಹಲಿ: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಡಿ.6ರಂದು ಭಾರತ ಭೇಟಿ ಮಾಡಲಿದ್ದಾರೆ. ಅವರು ಪ್ರಧಾನಿ ಮೋದಿಯವರ ಜೊತೆಗೆ 21ನೇ ಆವೃತ್ತಿಯ ರಷ್ಯಾ-ಭಾರತ ಶೃಂಗಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.
ಈ ಕುರಿತಾಗಿ ಶುಕ್ರವಾರ ನವದೆಹಲಿಯಲ್ಲಿ ವಿದೇಶಾಂಗ ಸಚಿವಾಲಯವು ಮಾಹಿತಿ ನೀಡಿದೆ. ಹಿಂದಿನ ವರ್ಷ ನಡೆಯಬೇಕಾಗಿದ್ದ ಈ ಶೃಂಗಸಭೆಯನ್ನು ಕೋವಿಡ್ 19 ಕಾರಣದಿಂದ ಮುಂದೂಡಲಾಗಿತ್ತು.
ನಡೆಯಲಿರುವ ಶೃಂಗಸಭೆಯಲ್ಲಿ ರಕ್ಷಣಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೆಲವು ಒಪ್ಪಂದಗಳಿಗೆ ಎರಡೂ ರಾಷ್ಟ್ರಗಳು ಸಹಿ ಮಾಡುವ ಸಾಧ್ಯತೆ ಇದೆ. ಇದಕ್ಕೂ ಮೊದಲು ಮಾಸ್ಕೋದಲ್ಲಿ ಭಾರತದ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್, ವಿದೇಶಾಂಗ ಸಚಿವ ಎಸ್.ಜೈಶಂಕರ್, ರಷ್ಯಾ ವಿದೇಶಾಂಗ ಸಚಿವ ಸರ್ಗೆ ಶೋಗೂ ಹಾಗೂ ವಿದೇಶಾಂಗ ಸಚಿವ ಸರ್ಗೆ ಲಾರ್ವೋ 2+2 ಮಾತುಕತೆಯನ್ನು ಕೈಗೊಳ್ಳಲಿದ್ದಾರೆ.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments