ಒಮಿಕ್ರಾನ್ ಆತಂಕ: ರಾಜ್ಯದಲ್ಲಿ ಇಂದು ಮಹತ್ವದ ಸಭೆ

Ad Code

ಒಮಿಕ್ರಾನ್ ಆತಂಕ: ರಾಜ್ಯದಲ್ಲಿ ಇಂದು ಮಹತ್ವದ ಸಭೆ



ಬೆಂಗಳೂರು: ಕೊರೋನಾ ವೈರಸ್ ರೂಪಾಂತರಿ ಒಮಿಕ್ರಾನ್ ಭೀತಿ ಹಿನ್ನೆಲೆ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ಬೆಚ್ಚರಿಕೆ ಕ್ರಮಗಳ ಬಗ್ಗೆ ಇಂದು ಮಹತ್ವದ ಸಭೆ ನಡೆಯಲಿದೆ. ಆರೋಗ್ಯ ಸಚಿವ ಡಾ.ಸುಧಾಕರ್ ರವರ ನೇತೃತ್ವದಲ್ಲಿ ಸಭೆ ನಡೆಯಲಿದ್ದು ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಕೂಡ ಈ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಸಭೆಯಲ್ಲಿ ವಿಧಾನ ಪರಿಷತ್ ಚುನಾವಣೆಗೆ ಮಾರ್ಗಸೂಚಿ, ಹಾಗೂ ಡಿಸೆಂಬರ್ ನಲ್ಲಿ ನಡೆಯಲಿರುವ ಬೆಳಗಾವಿ ಅಧಿವೇಶನದ ಬಗ್ಗೆ ಕೂಡ ಸುದೀರ್ಘವಾಗಿ ಚರ್ಚೆ ನಡೆಯಲಿದೆ. ಆ ಬಳಿಕ ಕಠಿಣ ನಿಯಮ ಜಾರಿಗೆ ಬರುವ ಸಾಧ್ಯತೆ ಇದೆ ಎಂದು ಪ್ರಕಟಣೆ ತಿಳಿಸಿದೆ.

Post a Comment

0 Comments