ಚೆನ್ನೈ: ಸಶಸ್ತ್ರ ಪಡೆಗಳ ಮುಖ್ಯಸ್ಥರಾದ ಜನರಲ್ ಬಿಪಿನ್ ರಾವತ್ ಸಹಿತ 14 ಮಂದಿ ಸೇನಾಧಿಕಾರಿಗಳು ಪ್ರಯಾಣಿಸುತ್ತಿದ್ದ ಭಾರತೀಯ ವಾಯುಪಡೆಯ ಎಂಐ-17ವಿ5 ಹೆಲಿಕಾಪ್ಟರ್ ತಮಿಳುನಾಡಿನ ಊಟಿ ಸಮೀಪ ನೀಲಗಿರಿ ಬೆಟ್ಟಗಳ ಪ್ರದೇಶದ ಕೂನೂರಿನ ಬಳಿ ಪತನಗೊಂಡಿದೆ.
ಹೆಲಿಕಾಪ್ಟರ್ ಸೂಲೂರ್ ವಾಯುನೆಲೆಯಿಂದ ವೆಲ್ಲಿಂಗ್ಟನ್‌ನ ಡಿಫೆನ್ಸ್ ಸರ್ವಿಸಸ್ ಕಾಲೇಜ್ (ಸಿಡಿಸಿ) ಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ತಮಿಳುನಾಡು ಅರಣ್ಯ ಸಚಿವ ಕೆ. ರಾಮಚಂದ್ರನ್ ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯಾಚರಣೆಯ ನೇತೃತ್ವ ವಹಿಸಿದ್ದಾರೆ.
ತುರ್ತು ರಕ್ಷಣಾ ತಂಡಗಳು ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿದ್ದು, ದುರಂತ ಸ್ಥಳದಿಂದ 7 ಮೃತದೇಹಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಹೆಲಿಕಾಪ್ಟರ್‌ನಲ್ಲಿದ್ದ ಮೂವರು ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಮೃತಪಟ್ಟವರನ್ನು ಗುರುತಿಸುವ ಕಾರ್ಯ ಪ್ರಗತಿಯಲ್ಲಿದೆ.
#WATCH | Latest visuals from the spot (between Coimbatore and Sulur) where a military chopper crashed in Tamil Nadu. CDS Bipin Rawat, his staff and some family members were in the chopper. pic.twitter.com/6oxG7xD8iW
— ANI (@ANI) December 8, 2021
ಭೂಸೇನಾ ಮುಖ್ಯಸ್ಥರಾದ ಜನರಲ್ ಎಂ.ಎಂ ನರವಣೆ ಅವರು ಘಟನೆಯ ಕುರಿತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ವಿವರಣೆ ನೀಡಿದ್ದಾರೆ. ಕೂಡಲೇ ಸಚಿವರು ಸಿಡಿಎಸ್ ಬಿಪಿನ್ ರಾವತ್ ಅವರ ನಿವಾಸಕ್ಕೆ ಧಾವಿಸಿದ್ದಾರೆ.
ಕೂನೂರಿನಿಂದ 7 ಕಿ.ಮೀ ದೂರದ ಜನವಸತಿ ಪ್ರದೇಶವಾದ ಕಟ್ಟೇರಿ ಎಂಬಲ್ಲಿ ಚಹಾ ತೋಟಗಳ ನಡುವೆ ಹೆಲಿಕಾಪ್ಟರ್ ಪತನಗೊಂಡಿದೆ.
ಘಟನೆ ಕುರಿತು ತೀವ್ರ ಆಘಾತ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಎ>ಕೆ ಸ್ಟಾಲಿನ್, ರಕ್ಷಣಾ ಕಾರ್ಯಳಿಗೆ ಅಗತ್ಯವಿರುವ ಎಲ್ಲ ಸಹಾಯ ಒದಗಿಸುವಂತೆ ಸ್ಥಳೀಯಾಡಳಿತಕ್ಕೆ ಆದೇಶ ನೀಡಿದ್ದಾರೆ.
ದಟ್ಟ ಮಂಜಿನಿಂದಾಗಿ ಗೋಚರತೆ ಕಡಿಮೆಯಿತ್ತು. ಹೀಗಾಗಿ ಹೆಲಿಕಾಪ್ಟರ್ ದೊಡ್ಡ ಮರವೊಂದಕ್ಕೆ ಡಿಕ್ಕಿ ಹೊಡೆದು ಪತನಗೊಂಡಿರಬೇಕೆಂದು ಸಾಂದರ್ಭಿಕ ಸನ್ನಿವೇಶಗಳಿಂದ ಊಹಿಸಲಾಗಿದೆ.
0 Comments