ವರದಿಗಳ ಪ್ರಕಾರ ಬಿಸಿಸಿಐ ಆಯ್ಕೆ ಸಮಿತಿಯು ವಿರಾಟ್ ಕೊಹ್ಲಿಗೆ ತನ್ನ ನಾಯಕತ್ವದಿಂದ ಕೆಳಗಿಳಿಯಲು 48 ಗಂಟೆಗಳ ಕಾಲಾವಕಾಶ ನೀಡಿದೆ. ಆದರೆ ಕೊಹ್ಲಿ ಅದ್ಯಾವುದಕ್ಕೂ ಪ್ರತಿಕ್ರಿಯಿಸದ ಕಾರಣ ಬಿಸಿಸಿಐ ಆಯ್ಕೆ ಸಮಿತಿಯು ರೋಹಿತ್ ಶರ್ಮಾಗೆ ಜವಾಬ್ದಾರಿಯ ಸ್ಥಾನ ನೀಡಲು ನಿರ್ಧರಿಸಿತು.
ಬುಧವಾರ ಬಿಸಿಸಿಐ ಬಿಡುಗಡೆ ಮಾಡಿದ ಪತ್ರಿಕಾ ಪ್ರಕಟಣೆಯಲ್ಲೂ ವಿರಾಟ್ ನ ಯಾವುದೇ ಹೇಳಿಕೆಯನ್ನು ಉಲ್ಲೇಖ ಮಾಡಲಾಗಿಲ್ಲ. ಏಕದಿನ ಮತ್ತು ಟಿ20 ತಂಡಗಳ ನಾಯಕನಾಗಿ ರೋಹಿತ್ ಶರ್ಮಾ ಅವರ ಹೆಸರನ್ನು ಬಿಸಿಸಿಐ ಆಯ್ಕೆ ಸಮಿತಿಯು ನಿರ್ಧರಿಸಿದೆ ಎಂದಷ್ಟೇ ಹೇಳಲಾಗಿದೆ.
0 Comments