ಕೋಲ್ಕತಾ: ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಅವರಿಗೆ ಕೋವಿಡ್ 19 ಸೋಂಕು ಪಾಸಿಟಿವದ ದೃಢವಾಗಿದೆ. ಅವರನ್ನು ಕೋಲ್ಕತ್ತಾ ವುಡ್ ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿ ನೀಡಿದೆ.
2021 ರಲ್ಲಿ ಸೌರವ್ ಗಂಗೂಲಿ ಅವರು ಮೂರನೇ ಬಾರಿಗೆ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ಕಳೆದ ಜನವರಿಯಲ್ಲಿ ಎದೆ ನೋವಿನ ಕಾರಣದಿಂದ ಎರಡು ಬಾರಿ ಚಿಕಿತ್ಸೆಗೆ ಒಳಗಾಗಿದ್ದರು.
"ಸೌರವ್ ಗಂಗೂಲಿ ಅವರನ್ನು ಕಳೆದ ರಾತ್ರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರಿಗೆ ಚಿಕಿತ್ಸೆ ನೀಡಲಾಗುತ್ತಿದೆ" ಎಂದು ಬಿಸಿಸಿಐ ಮೂಲಗಳನ್ನು ಉದ್ದೇಶಿಸಿ ಪಿಟಿಐ ವರದಿ ನೀಡಿದೆ.
0 Comments