ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಸಂಗ್ರಹದಿಂದ ಕಳೆದ ಮೂರು ಆರ್ಥಿಕ ವರ್ಷಗಳಲ್ಲಿ ಕೇಂದ್ರ ಸರ್ಕಾರಕ್ಕೆ ಸುಮಾರು 8 ಲಕ್ಷ ಕೋಟಿ ಆದಾಯ ಬಂದಿರುವುದಾಗಿ ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಲೋಕಸಭೆಗೆ ಮಾಹಿತಿ ನೀಡಿದ್ದಾರೆ.
ರಾಜ್ಯಸಭೆಯಲ್ಲಿ ಕೇಳಿದ ಪ್ರಶ್ನೆಗೆ ಉತ್ತರಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ " 2018-19 ರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆಯಿಂದ 2,10,282 ಕೋಟಿ ರೂಪಾಯಿ, 2019-20 ರಲ್ಲಿ 2,19,750 ಕೋಟಿ ರೂಪಾಯಿ ಹಾಗೂ 3,71,908 ಕೋಟಿ ರೂಪಾಯಿ ಆದಾಯ ಸಂಗ್ರಹಿಸಿರುವುದಾಗಿ ಹೇಳಿದ್ದಾರೆ.
ನವೆಂಬರ್ 4 ರಂದು ಕೇಂದ್ರ ಸರ್ಕಾರ ಪೆಟ್ರೋಲ್ ಮೇಲಿನ ಅಬಕಾರಿ ಸುಂಕವನ್ನು 5 ರೂಪಾಯಿ ಹಾಗೂ ಡೀಸೆಲ್ ಮೇಲಿನ 10 ರೂಪಾಯಿ ಪ್ರತಿ ಲೀಟರ್ ಗೆ ಇಳಿಕೆ ಮಾಡಿತ್ತು. ನಂತರ ರಾಜ್ಯ ಸರ್ಕಾರಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ವ್ಯಾಟ್ ಅನ್ನು ಕಡಿತಗೊಳಿಸಿದ್ದವು.
0 Comments