ನವದೆಹಲಿ: ದೇಶದಲ್ಲಿ ಮಕ್ಕಳಿಗೆ ಕೊರೋನಾ ಲಸಿಕೆ ನೀಡುವುದರ ಬಗ್ಗೆ ಇನ್ನೂ ಖಚಿತವಾದ ಮಾಹಿತಿ ಲಭ್ಯವಿಲ್ಲ. ಇದರ ನಡುವೆಯೇ ಪುಣೆಯ "ಸೀರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾ" ಅದಾರ್ ಪೂನಾವಾಲ ನೀಡಿದ ಮಾಹಿತಿ ಪ್ರಕಾರ ಮುಂದಿನ ಆರು ತಿಂಗಳಲ್ಲಿ ಮಕ್ಕಳಿಗಾಗಿ ಕೊವೊವ್ಯಾಕ್ಸ್ ಲಸಿಕೆಯನ್ನು ಮಾರುಕಟ್ಟೆಗೆ ಬಿಡುಗಡೆ ಮಾಡುವುದಾಗಿ ಹೇಳಿದ್ದಾರೆ.
ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು 'ಲಸಿಕೆ ಪ್ರಯೋಗದ ಕಾರ್ಯಗಳು ಪ್ರಗತಿ ಹಂತದಲ್ಲಿದೆ. ಮುಂದಿನ 6 ತಿಂಗಳಲ್ಲಿ ಮಕ್ಕಳಿಗಾಗಿ ನಮ್ಮ ಸಂಸ್ಥೆ ಸಂಶೋಧಿಸಿರುವ ಕೊವೊವ್ಯಾಕ್ಸ್ ಲಸಿಕೆಯನ್ನು ಮಾರುಕಟ್ಟೆ ಬಿಡುಗಡೆ ಮಾಡಲಾಗುವುದು' ಎಂದು ಹೇಳಿದ್ದಾರೆ.
ಸಂಶೋಧನೆ, ಪರೀಕ್ಷೆ ಮತ್ತು ಪ್ರಾಯೋಗಿಕ ಕಾರ್ಯಾಚರಣೆ ಮತ್ತು ಸರ್ಕಾರದಿಂದ ಶೀಘ್ರವಾಗಿ ಅನುಮತಿ ಸಿಕ್ಕಿದರೆ ಮೂರು ತಿಂಗಳಲ್ಲಿಯೇ ಮಾರುಕಟ್ಟೆಗೆ ಬರಲಿದೆ ಎಂದು ಹೇಳಿದರು.
0 Comments