ಹೊಸದಿಲ್ಲಿ: ದೇಶದಾದ್ಯಂತ 15-18 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಲು ವೇದಿಕೆ ಸಿದ್ಧವಾಗಿದೆ. ಅದಕ್ಕೆ ಸಂಬಂಧಿಸಿದ ಮಾರ್ಗಸೂಚಿಯನ್ನೂ ಕೇಂದ್ರ ಸರ್ಕಾರ ಸೋಮವಾರ ಬಿಡುಗಡೆ ಮಾಡಿದೆ.
ಶನಿವಾರವಷ್ಟೆ ಭಾರತ್ ಬಯೋಟೆಕ್ ನ ಕೊವ್ಯಾಕ್ಸಿನ್ ಲಸಿಕಯನ್ನು 12 ವರ್ಷ ಮೇಲ್ಪಟ್ಟ ಮಕ್ಕಳಿಗೆ ನೀಡಲು ಅನುಮತಿ ನೀಡಿದ್ದು, ಜನವರಿ 3 ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ. ಆದರೆ ಸದ್ಯಕ್ಕೆ ಮಕ್ಕಳಿಗೆ ಕೊವ್ಯಾಕ್ಸಿನ್ ಮಾತ್ರವೇ ನೀಡಲು ನಿರ್ಧರಿಸಲಾಗಿದೆ.
ಇನ್ನು ವಿವಿಧ ಖಾಯಿಲೆಗಳಿಂದ ಬಳಲುತ್ತಿರುವವರಿಗೆ ಮತ್ತು 60 ವರ್ಷ ಮೇಲ್ಪಟ್ಟವರಿಗೆ ಬೂಸ್ಟರ್ ಡೋಸ್ ನೀಡುವ ಕುರಿತು ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ. ಅದರಂತೆ ಎರಡನೇ ಡೋಸ್ ಪಡೆದು 9 ತಿಂಗಳು ಪೂರ್ಣಗೊಂಡವರಿಗೆ ಮಾತ್ರವೇ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತದೆ ಎಂದು ಸರ್ಕಾರ ತಿಳಿಸಿದೆ.
0 Comments