ಹೌದು. ಪ್ರತೀ ವರ್ಷ ಈಜಿಪ್ಟ್ ದೇಶದಲ್ಲಿ ನಡೆಯುವ ' ಮಿಸ್ ಇಕೋ ಟೀನ್ ಇಂಟರ್ ನ್ಯಾಷನಲ್' ಸ್ಪರ್ಧೆಗೆ ಧಾರವಾಡದ ಕುವರಿ ಖುಷಿ ಟಿಕಾರೆ ಆಯ್ಕೆಯಾಗಿದ್ದಾಳೆ.
ವಿದ್ಯಾಗಿರಿಯ ಜೆಎಸ್ಎಸ್ ಕಾಲೇಜಿನಲ್ಲಿ ಪಿಯುಸಿ ಓದುತ್ತಿರುವ ಖುಷಿ ಟಿಕಾರೆ ಅಂತರಾಷ್ಟ್ರೀಯ ಮಟ್ಟದ ಸೌಂದರ್ಯ ಸ್ಪರ್ಧೆಯಲ್ಲಿ ಭಾರತವನ್ನು ಪ್ರತಿನಿಧಿಸಲಿದ್ದಾಳೆ.
ಇದೇ ಡಿಸೆಂಬರ್ 10ರಿಂದ 21ರವರೆಗೆ ಈಜಿಪ್ಟ್ ದೇಶದ ಲುಕ್ಸಾರ್ ಸಿಟಿಯಲ್ಲಿ ಈ ಸ್ಪರ್ಧೆಯನ್ನು ಆಯೋಜಿಸಲಾಗಿದೆ. 35 ದೇಶಗಳಿಂದ ಸ್ಪರ್ಧಾಳುಗಳು ಆಗಮಿಸಲಿದ್ದು 12 ದಿನಗಳ ಕಾಲ ಸ್ಪರ್ಧೆ ನಡೆಯಲಿದೆ.
0 Comments