ಅನಿವಾರ್ಯವಾದರೆ ನೈಟ್ ಕರ್ಫ್ಯೂ ಜಾರಿಯಾಗಲಿ: ಕೇಂದ್ರ ಸರ್ಕಾರ

Ad Code

ಅನಿವಾರ್ಯವಾದರೆ ನೈಟ್ ಕರ್ಫ್ಯೂ ಜಾರಿಯಾಗಲಿ: ಕೇಂದ್ರ ಸರ್ಕಾರ

ನವದೆಹಲಿ: "ಅನಿವಾರ್ಯ ಆದರೆ ನೈಟ್ ಕರ್ಫ್ಯೂ ಜಾರಿಗೊಳಿಸಿ, ಕೊರೋನಾ ವಾರ್ ರೂಮ್ ಗಳನ್ನು ಸ್ವಚ್ಛಗೊಳಿಸಿ ಮತ್ತು ಐಸಿಯು ಬೆಡ್ ಗಳನ್ನು ಕೂಡ ಸಿದ್ಧಗೊಳಿಸಿ" ಎಂದು ಕೇಂದ್ರ ಸರ್ಕಾರ ರಾಜ್ಯಗಳಿಗೆ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚನೆ ನೀಡಿದೆ.

ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ಸುತ್ತೋಲೆ ಹೊರಡಿಸಿದ್ದಾರೆ. ಅಷ್ಟೇ ಅಲ್ಲದೆ ರೋಗ ಇರಲಿ , ಇಲ್ಲದೇ ಇರಲಿ. ಸುರಕ್ಷತೆ ಎಂಬುವುದು ಬಹು ಮುಖ್ಯ. ಡೆಲ್ಟಾಗೆ ಹೋಲಿಕೆ ಮಾಡಿದರೆ ಒಮಿಕ್ರಾನ್ ಮೂರು ಪಟ್ಟು ಹೆಚ್ಚು ವೇಗವಾಗಿ ಹರಡುತ್ತದೆ ಎಂದಿದ್ದಾರೆ.

ಇದುವರೆಗೆ ದೇಶದಲ್ಲಿ ಒಟ್ಟು ಒಮಿಕ್ರಾನ್ ಪ್ರಕರಣದ ಸಂಖ್ಯೆ 200 ದಾಟಿದೆ. ಆದ್ದರಿಂದ ಭಯಭೀತರಾಗದೆ ಮುನ್ನೆಚ್ಚರಿಕೆ ಕ್ರಮವಾಗಿ ಇಂತಹ ಕ್ರಮಗಳನ್ನು ಅನುಸರಿಸುವುದು ಅಗತ್ಯ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಕೂಡ ತಿಳಿಸಿದೆ.

Post a Comment

0 Comments