ಢಾಕಾ: ಸೆಮಿಫೈನಲ್ ನಲ್ಲಿ ನೀಡಿದ ನೀರಸ ಪ್ರದರ್ಶನದಿಂದ ಹೊರಬಂದ ಟೀಂ ಇಂಡಿಯಾ ಏಷ್ಯನ್ ಚಾಂಪಿಯನ್ ಟ್ರೋಫಿ ಟೂರ್ನಿಯಲ್ಲಿ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಗಿದೆ.
ಟೋಕಿಯೋ ಒಲಿಂಪಿಕ್ಸ್ ನಲ್ಲಿ ಕಂಚಿನ ಪದಕ ಪಡೆದ ಭಾರತ ಏಷ್ಯನ್ ಚಾಂಪಿಯನ್ ಟ್ರೋಫಿ ಟೂರ್ನಿಯ ಲೀಗ್ ಹಂತದಲ್ಲಿ ಅಗ್ರಸ್ಥಾನ ಪಡೆದು ಅಂತಿಮ ನಾಲ್ಕರ ಘಟ್ಟದ ಪಂದ್ಯದಲ್ಲಿ ಜಪಾನ್ ಎದುರು 3-5 ಗೋಲ್ ಗಳಿಂದ ಫೈನಲ್ ತಲುಪುವಲ್ಲಿ ವಿಫಲವಾಯಿತು.
ಕಂಚಿನ ಪದಕದ ಸಲುವಾಗಿ ಎದುರಾಳಿ ಪಾಕಿಸ್ತಾನ ವಿರುದ್ಧ ಬುಧವಾರ ನಡೆದ ಹೈ ವೋಲ್ಟೇಜ್ ಪಂದ್ಯದಲ್ಲಿ ಒತ್ತಡ ನಿಭಾಯಿಸಿದ ಭಾರತ ತಂಡ 4-3 ಗೋಲ್ ಗಳಿಂದ ಬಗ್ಗುಬಡಿದ ಕಂಚಿನ ಪದಕ ಗೆಲ್ಲುವಲ್ಲಿ ಯಶಸ್ವಿಯಾಯಿತು.
0 Comments