ನವದೆಹಲಿ: ಭಾರತೀಯ ಹೆಣ್ಣು ಮಕ್ಕಳ ವಿವಾಹ ವಯಸ್ಸಿನ ಮಿತಿಯನ್ನು 18 ವರ್ಷದಿಂದ 21 ವಯಸ್ಸಿಗೆ ಏರಿಕೆ ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸಚಿವ ಸಂಪುಟ ಅಂಕಿತ ಹಾಕಿರುವುದಾಗಿ ಮೂಲಗಳು ತಿಳಿಸಿವೆ.
ಹೆಣ್ಣು ಮಕ್ಕಳ ಮದುವೆಯ ವಯಸ್ಸಿನ ಮಿತಿಯನ್ನು ಹೆಚ್ಚಳ ಮಾಡುವುದರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಪ್ರಸ್ತಾಪಿಸಿದ್ದರು.
ಈ ಬಗ್ಗೆ ಮಾತನಾಡಿರುವ ಅವರು " ನಮ್ಮ ದೇಶದಲ್ಲಿ ಹೆಣ್ಣು ಮಕ್ಕಳ ಆರೋಗ್ಯಕ್ಕೆ ಹೆಚ್ಚು ಒತ್ತು ನೀಡಬೇಕಾಗುತ್ತದೆ. ಅಪೌಷ್ಠಿಕತೆಯಿಂದ ಹೆಣ್ಣು ಮಕ್ಕಳನ್ನು ಕೂಡ ರಕ್ಷಿಸುವುದು ನಮ್ಮ ಜವಾಬ್ದಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಹೆಣ್ಣು ಮಕ್ಕಳು ಸಮರ್ಪಕವಾದ ವಯಸ್ಸಿಗೆ ಮದುವೆಯಾಗಬೇಕಾದ ಅಗತ್ಯವಿದೆ ಎಂದು ಹೇಳಿದ್ದಾರೆ.
ಪ್ರಸ್ತುತ ದೇಶದಲ್ಲಿ ಹುಡುಗಿಯರು ಮದುವೆ ಆಗುವ ವಯಸ್ಸಿನ ಮಿತಿ 18 ಇದ್ದು ಅದನ್ನು 21ಕ್ಕೆ ಹೆಚ್ಚಳ ಮಾಡುವುದಾಗಿ ಕೇಂದ್ರ ಸರ್ಕಾರ ನಿರ್ಧರಿಸಿದೆ. ಬಾಲ್ಯವಿವಾಹ, ಲವ್ ಜಿಹಾದ್ ನಂತಹ ಪ್ರಕರಣಗಳು ಕೂಡ ಇದರಿಂದ ಕಡಿಮೆಯಾಗುವ ಸಾಧ್ಯತೆಯಿದೆ ಎಂದು ಸರ್ಕಾರ ಅಭಿಪ್ರಾಯಪಟ್ಟಿದೆ.
0 Comments