ಶ್ರೀನಗರ: ಜಮ್ಮು ಕಾಶ್ಮೀರದ ಅನಂತ್ ನಾಗ್ ಮತ್ತು ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭದ್ರತಾ ಪಡೆಯ ಕಾರ್ಯಾಚರಣೆಯ ಎನ್ಕೌಂಟರ್ ನಲ್ಲಿ ಆರು ಮಂದಿ ಜೈಶ್ ಎ ಮೊಹಮ್ಮದ್ ಸಂಘಟನೆಯ ಉಗ್ರರು ಬಲಿಯಾಗಿರುವ ಘಟನೆ ಗುರುವಾರ ನಡೆದಿರುವುದಾಗಿ ವರದಿ ತಿಳಿಸಿದೆ.
ಜಮ್ಮು ಕಾಶ್ಮೀರದ ಅನಂತ್ ಜಿಲ್ಲೆಯಲ್ಲಿ ಭದ್ರತಾ ಪಡೆಯ ಕಾರ್ಯಾಚರಣೆಯಲ್ಲಿ ಮೂವರು ಉಗ್ರರು ಹತ್ಯೆಯಾಗಿದ್ದರು. ಕುಲ್ಗಾಮ್ ನಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಮೂವರು ಜೈಶ್ ಉಗ್ರರು ಹತ್ಯೆಗೀಡಾಗಿದ್ದಾರೆ ಎಂದು ವರದಿ ತಿಳಿಸಿದೆ.
ಇಬ್ಬರು ಪಾಕಿಸ್ತಾನಿ ಉಗ್ರರು ಸೇರಿದಂತೆ ಆರು ಮಂದಿ ಜೈಶ್ ಉಗ್ರರು 12 ಗಂಟೆಯ ಕಾರ್ಯಾಚರಣೆಯಲ್ಲಿ ಸಾವನ್ನಪ್ಪಿರುವುದಾಗಿ ಐಜಿಪಿ ವಿಜಯ್ ಕುಮಾರ್ ತಿಳಿಸಿದ್ದಾರೆ.
ಇದೊಂದು ಬಹುದೊಡ್ಡ ಯಶಸ್ವಿ ಕಾರ್ಯಾಚರಣೆ ಎಂದಿರುವ ಐಜಿಪಿ ವಿಜಯ್ ಕುಮಾರ್ ಆರು ಮಂದಿ ಉಗ್ರರಲ್ಲಿ ಇಬ್ಬರು ಪಾಕಿಸ್ತಾನಿಯರು, ಇಬ್ಬರು ಸ್ಥಳೀಯರು ಇನ್ನು ಇಬ್ಬರ ಬಗ್ಗೆ ಗುರುತು ಪತ್ತೆ ಹಚ್ಚಬೇಕಾಗಿದೆ ಎಂದು ಹೇಳಿದರು.
0 Comments