2015 ರಲ್ಲಿ ಈ ಯೋಜನೆ ಜಾರಿಗೆ ಬಂದಿತ್ತು. ಕೇವಲ ಮೂರು ತಿಂಗಳಲ್ಲೇ 3 ಕೋಟಿ ಜನರ ಆಧಾರ್ ನ್ನು ಲಿಂಕ್ ಮಾಡುವ ಕೆಲಸ ಕೂಡ ನಡೆದಿತ್ತು. ಈ ಪ್ರಕ್ರಿಯೆಯಲ್ಲಿ ಜನರ ಖಾಸಗಿತನಕ್ಕೆ ಧಕ್ಕೆ ಬರುತ್ತದೆ ಎಂಬ ವಿಚಾರವಾಗಿ ಸುಪ್ರೀಂಕೋರ್ಟ್ ನಲ್ಲಿ ಅರ್ಜಿ ಹಾಕಲಾಗಿತ್ತು. ಆದ್ದರಿಂದ ಈ ಪ್ರಕ್ರಿಯೆಯನ್ನು ಅಂದು ಅರ್ಧಕ್ಕೆ ಕೈಬಿಡಲಾಗಿತ್ತು.
ಕೇಂದ್ರ ಚುನಾವಣಾ ಆಯೋಗ ತಿಳಿಸುವಂತೆ ಆಧಾರ್ ನ್ನು ಪ್ರತಿಯೊಬ್ಬ ವ್ಯಕ್ತಿಗೂ ನೀಡಲಾಗುತ್ತದೆ. 18 ವರ್ಷ ಮೇಲ್ಪಟ್ಟ ಪ್ರತಿಯೊಬ್ಬರು ಆಧಾರ್ ನ್ನು ಆಧಾರವಾಗಿಟ್ಟುಕೊಂಡು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಕೊಳ್ಳಬಹುದು. ಇದರಿಂದ ದತ್ತಾಂಶ ಸೋರಿಕೆಯನ್ನು ತಪ್ಪಿಸಬಹುದು ಎಂಬ ಹೇಳಿಕೆಯನ್ನು ಕೇಂದ್ರ ಸರ್ಕಾರ ಒಪ್ಪುತ್ತದೆ.
ಸೋಮವಾರ ಲೋಕಸಭೆಯಲ್ಲಿ ಈ ವಿಚಾರವಾಗಿ ಮಸೂದೆ ಮಂಡಿಸಿ ಒಪ್ಪಿಗೆಯನ್ನು ಸ್ವೀಕರಿಸಲಾಗಿದೆ. ಮಂಗಳವಾರ ರಾಜ್ಯಸಭೆಯಲ್ಲೂ ವಿಧೇಯಕವನ್ನು ಮಂಡಿಸಲಾಗಿದ್ದು, ಧ್ವನಿಮತದಿಂದ ಅಂಗೀಕರಿಸಲಾಗಿದೆ. ಅತ್ಯಂತ ಹಳೆಯದಾದ ಈ ಯೋಚನೆಯನ್ನು ಕೇಂದ್ರ ಸರ್ಕಾರ ಯೋಜನಾ ರೂಪಕ್ಕೆ ತರುವ ಪ್ರಯತ್ನ ಮಾಡುತ್ತಿದೆ. ಮತದಾರರ ಗುರುತಿನ ಚೀಟಿಯನ್ನು ಆಧಾರ್ ಗೆ ಲಿಂಕ್ ಮಾಡುವುದರ ಹಿಂದೆ ಅನೇಕ ಉದ್ದೇಶಗಳು ಅಡಗಿವೆ.
ಬಹಳಷ್ಟು ಸಂಖ್ಯೆಯಲ್ಲಿರುವ ನಕಲಿ ಮತದಾರರನ್ನು ಗುರುತಿಸಬಹುದು ಹಾಗೂ ಒಂದು ಕಡೆಯಿಂದ ಇನ್ನೊಂದು ಕಡೆಗೆ ಹೋಗುವುದಾದರೆ ಸುಲಭವಾಗಿ ವಿಳಾಸ ಬದಲಿಸಬಹುದು.ಅಷ್ಟೇ ಅಲ್ಲದೆ ಮತದಾರರ ಪಟ್ಟಿಯಲ್ಲಿಯೇ ಮತದಾರನ ಹೆಸರು ಬರುವುದರಿಂದ ನಕಲಿ ಸಮಸ್ಯೆ ಕಡಿಮೆಯಾಗುತ್ತದೆ. ಈ ರೀತಿ ಅನೇಕ ಧ್ಯೇಯಗಳನ್ನು ಇಟ್ಟುಕೊಂಡಿರುವ ಕೇಂದ್ರ ಸರ್ಕಾರ ಅನೇಕ ರೀತಿಯಲ್ಲಿ ಚರ್ಚೆ ನಡೆಸಿ ಅನುಷ್ಠಾನಕ್ಕೆ ತರಬೇಕೆಂದು ನಿರ್ಧರಿಸಿದೆ.
0 Comments