ಹೈದರಾಬಾದ್: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಭಾರೀ ಮಳೆಯ ಸಂಭಾವ್ಯ ಹಾನಿಯನ್ನು ಕಡಿಮೆ ಮಾಡಲು ವಿಜಯನಗರಂ ಮತ್ತು ಶ್ರೀಕಾಕುಳಂ ಜಿಲ್ಲಾಡಳಿತವು ಆಯಾ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಮತ್ತು ಎಲ್ಲಾ ಕರಾವಳಿ ಜಿಲ್ಲಾ ಕೇಂದ್ರಗಳಲ್ಲಿ ನಿಯಂತ್ರಣ ಕೊಠಡಿಗಳನ್ನು ಸ್ಥಾಪಿಸಿದೆ. ಇದು ಡಿಸೆಂಬರ್ ವರೆಗೆ ಇರಬಹುದಾದ ಚಂಡಮಾರುತದ ಬಗ್ಗೆ ಎಚ್ಚರಿಕೆ ನೀಡಿದೆ.
ಹವಾಮಾನ ಇಲಾಖೆಯ ವರದಿಯಂತೆ ಮಳೆಯ ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮತ್ತು ಭಾರೀ ಹಾನಿಯನ್ನು ನಿಯಂತ್ರಿಸಲು ತೆಗೆದುಕೊಳ್ಳಬೇಕಾದ ಕ್ರಮದ ಬಗ್ಗೆ ಚಿಂತನೆ ನಡೆಯುತ್ತಿದೆ. ಡಿಸೆಂಬರ್ 4ರಂದು ಸೈಕ್ಲೋನಿಕ್ ಚಂಡಮಾರುತ ಉತ್ತರ ಆಂಧ್ರಪ್ರದೇಶದ ಕರಾವಳಿ ಭಾಗಕ್ಕೆ ಪರಿಣಾಮ ಬೀರುವ ಸಾಧ್ಯತೆ ಇದೆ.
ವಿಜಯನಗರದ ಜಿಲ್ಲಾಧಿಕಾರಿ ಎ. ಸೂರ್ಯಕುಮಾರಿ ಮಾತನಾಡಿ "ಹವಾಮಾನ ಇಲಾಖೆಯ ವರದಿಯಂತೆ ಮಳೆಯ ಜೊತೆಗೆ ಗಾಳಿಯು ಗಂಟೆಗೆ 70ಕಿ.ಮೀಟರ್ ವೇಗದಲ್ಲಿ ಚಲಿಸುವ ಸಾಧ್ಯತೆ ಇದ್ದು ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಮೀನುಗಾರರನ್ನು ಮೂರು ದಿನ ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ" ಎಂದು ಹೇಳಿದರು.
(ಉಪಯುಕ್ತ ನ್ಯೂಸ್)
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments