ನೌಕಾಪಡೆ ದಿನಾಚರಣೆಗೆ ಪ್ರಧಾನಿ ಮೋದಿ ಶುಭಾಶಯ

Ad Code

ನೌಕಾಪಡೆ ದಿನಾಚರಣೆಗೆ ಪ್ರಧಾನಿ ಮೋದಿ ಶುಭಾಶಯ


ಹೊಸದಿಲ್ಲಿ: ಭಾರತೀಯ ನೌಕಾಪಡೆಯು ಪಾಕಿಸ್ತಾನದ ವಿರುದ್ಧ ಜಯಗಳಿಸಿದ ಸುದಿನವನ್ನು ಪ್ರತೀ ವರ್ಷ ಡಿಸೆಂಬರ್ 4 ರಂದು ನೌಕಾಪಡೆ ದಿನವನ್ನಾಗಿ ಆಚರಿಸಲಾಗುತ್ತದೆ. 1971ರ ಭಾರತ - ಪಾಕ್ ಯುದ್ಧದಲ್ಲಿ ಭಾರತೀಯ ನೌಕಾಪಡೆ ಮೊದಲ ಬಾರಿ ಹಡಗು ನಿಗ್ರಹ ಕ್ಷಿಪಣಿ ಬಳಸಿ ಪಾಕ್ ನ ಮೂರು ಯುದ್ಧ ಹಡಗುಗಳನ್ನು ಕರಾಚಿಯ ಸಮುದ್ರದಲ್ಲಿ ಹೊಡೆದು ಹಾಕಿತು. ಆ ದಿನದ ನೆನಪಿಗಾಗಿ ನೌಕಾದಿನ ಆಚರಿಸಲಾಗುತ್ತದೆ.

ಈ ವಿಶೇಷ ದಿನದ ಪ್ರಯುಕ್ತ ದೇಶದ ಪ್ರಧಾನಿ ನರೇಂದ್ರ ಮೋದಿಯವರು ನೌಕಾಪಡೆ ಸಿಬ್ಬಂದಿಗೆ ಶುಭಾಶಯ ಕೋರಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ 'ಭಾರತದ ನೌಕಾಪಡೆಯ ಕೊಡುಗೆಗಳ ಬಗ್ಗೆ ನಾನು ಹೆಮ್ಮೆ ಪಡುತ್ತೇನೆ. ನೈಸರ್ಗಿಕ ವಿಕೋಪಗಳಂತಹ ಬಿಕ್ಕಟ್ಟಿನ ಸಂದರ್ಭಗಳನ್ನು ಎದುರಿಸುವಲ್ಲಿ ನಮ್ಮ ನೌಕಾಪಡೆ ಯಾವಾಗಲೂ ಮುಂಚೂಣಿಯಲ್ಲಿರುತ್ತದೆ ' ಎಂದು ಟ್ವಿಟರ್ ನಲ್ಲಿ ಬರೆದುಕೊಂಡಿದ್ದಾರೆ. ಅದಕ್ಕೆ ಸಂಬಂಧಿಸಿದ ವೀಡಿಯೋವನ್ನು ಕೂಡ ಹಂಚಿಕೊಂಡಿದ್ದಾರೆ.





(ಉಪಯುಕ್ತ ನ್ಯೂಸ್)



ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ 

Post a Comment

0 Comments