ಉತ್ತರಪ್ರದೇಶಕ್ಕೆ ನಾಳೆ ಪ್ರಧಾನಿ ಭೇಟಿ: 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಭಾಷಣ

Ad Code

ಉತ್ತರಪ್ರದೇಶಕ್ಕೆ ನಾಳೆ ಪ್ರಧಾನಿ ಭೇಟಿ: 2 ಲಕ್ಷ ಮಹಿಳೆಯರನ್ನು ಉದ್ದೇಶಿಸಿ ಭಾಷಣ




ಲಖನೌ: ಪ್ರಧಾನಮಂತ್ರಿ ನರೇಂದ್ರ ಮೋದಿ ನಾಳೆ (ಡಿ.21) ಮತ್ತೆ ಉತ್ತರ ಪ್ರದೇಶಕ್ಕೆ ಭೇಟಿ ನೀಡಲಿದ್ದಾರೆ. ಅಲ್ಲಿ ಸುಮಾರು ಎರಡು ಲಕ್ಷಕ್ಕೂ ಅಧಿಕ ಮಹಿಳೆಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಮಾಹಿತಿ ನೀಡಿದೆ. 

ಮಧ್ಯಾಹ್ನ 1 ಗಂಟೆಗೆ ಸರಿಯಾಗಿ ಪ್ರಯಾಗ್ ರಾಜ್ ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಧಾನಿಯವರು ಸ್ತ್ರೀಯರಿಗೆ ಮೂಲಭೂತವಾಗಿ ಇರಬೇಕಾದ ಕೌಶಲ್ಯ, ಅವರ ಪ್ರಗತಿಗಾಗಿ ಆಗಬೇಕಾದ ಆರ್ಥಿಕ ಉತ್ತೇಜನ ಮುಂತಾದವುಗಳ ಬಗ್ಗೆ ಮಾತನಾಡಲಿದ್ದಾರೆ.  

ಕಾರ್ಯಕ್ರಮದ ಭಾಗವಾಗಿ ಮಹಿಳೆಯರಿಗೆ ಆರ್ಥಿಕ ನೆರವು ನೀಡುವ ಉದ್ದೇಶಕ್ಕಾಗಿ ಪ್ರಧಾನಿಯವರು ಸುಮಾರು 1,000 ಕೋಟಿ ರೂಪಾಯಿಯನ್ನು ಸ್ವಸಹಾಯ ಗುಂಪುಗಳ ಖಾತೆಗೆ ವರ್ಗಾಯಿಸುವರು. ಇದರಿಂದ 16 ಲಕ್ಷ ಮಹಿಳೆಯರಿಗೆ ಅನುಕೂಲವಾಗಲಿದೆ ಎಂದು ಪಿಎಂಒ ಮಾಹಿತಿ ನೀಡಿದೆ.

Post a Comment

0 Comments