ಒಮಿಕ್ರಾನ್ ಬಗ್ಗೆ ನಿಖರವಾದ ಮಾಹಿತಿಯ ಕೊರತೆಯೇ ಪೋಷಕರ ಗೊಂದಲಕ್ಕೆ ಮುಖ್ಯ ಕಾರಣವಾಗಿರಬಹುದು. ಈ ಭಯದಿಂದಾಗಿ ಈಗಾಗಲೇ ಅನೇಕ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸಲು ಹಿಂಜರಿಯುತ್ತಿದ್ದಾರೆ ಎಂಬುವುದು ಸಮೀಕ್ಷೆಯಲ್ಲಿ ತಿಳಿದುಬರುತ್ತದೆ.
ಹೊಸ ಕೊರೋನಾ ರೂಪಾಂತರಿ ಒಮಿಕ್ರಾನ್ ಬಗ್ಗೆ ಭಾರತದ 308 ಜಿಲ್ಲೆಗಳ ಪೋಷಕರು ಪ್ರತಿಕ್ರಿಯೆ ನೀಡಿದ್ದು ಇದರ ಆಧಾರದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಕಡಿಮೆಯಾಗಲಿದೆ ಎಂದು ಊಹಿಸಬಹುದಾಗಿದೆ.
ಭಾರತದಲ್ಲಿ ಇದುವರೆಗೆ ಒಮಿಕ್ರಾನ್ ಸೋಂಕು ಪತ್ತೆಯಾಗಿಲ್ಲ. ಆದಾಗ್ಯೂ ಶಿಕ್ಷಣ ವ್ಯವಸ್ಥೆಯ ಮೇಲೆ ಇದು ಪರಿಣಾಮ ಬೀರುತ್ತಿದೆ. ಇದು ಆತಂಕಕಾರಿ ವಾತಾವರಣವನ್ನು ಸೃಷ್ಠಿಸಿದೆ.
ಈ ವೈರಸ್ ಮೊದಲು ಪತ್ತೆಯಾದ ದಕ್ಷಿಣ ಆಫ್ರಿಕಾದ ವೈದ್ಯರುಗಳು ತಿಳಿಸಿದ ಅಂಶವನ್ನು ಸಮೀಕ್ಷೆಯಲ್ಲಿ ಉಲ್ಲೇಖಿಸಲಾಗಿದೆ.
0 Comments