ಸೆಂಚೂರಿಯನ್: ದಕ್ಷಿಣ ಆಫ್ರಿಕಾ ಕ್ರಿಕೆಟ್ ತಂಡದ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಕ್ವಿಂಟನ್ ಡಿ ಕಾಕ್ ಅವರು ದಿಢೀರನೆ ಟೆಸ್ಟ್ ಕ್ರಿಕೆಟ್ ಗೆ ವಿದಾಯ ಘೋಷಿಸಿದ್ದಾರೆ.
ಭಾರತದ ವಿರುದ್ಧ ಆಡಿದ ಮೊದಲ ಟೆಸ್ಟ್ ಪಂದ್ಯ ಅಂತ್ಯವಾದ ಕೆಲವೇ ಕ್ಷಣಗಳಲ್ಲಿ ಕ್ವಿನ್ನಿ ಈ ಘೋಷಣೆ ಮಾಡಿದ್ದಾರೆ.
ಕುಟುಂಬಕ್ಕೆ ಹೆಚ್ಚಿನ ಸಮಯ ನೀಡಬೇಕಾಗಿರುವುದರಿಂದ ಟೆಸ್ಟ್ ಕ್ರಿಕೆಟ್ ನಿಂದ ದೂರ ಉಳಿಯಬೇಕಾಯಿತು. ಇನ್ನು ಮುಂಬರುವ ಪಂದ್ಯಗಳಿಗೆ ನಾನು ಲಭ್ಯವಿರುವುದಿಲ್ಲ. ಆದರೆ ಏಕದಿನ ಮತ್ತು ಟಿ20 ಪಂದ್ಯಗಳಿಗೆ ನಾನು ಬರುತ್ತೇನೆ ಎಂದು ಅವರು ಹೇಳಿದರು.
ಡಿಕಾಕ್ ಹಾಗೂ ಪತ್ನಿ ಸಾಶಾ ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಹೀಗಾಗಿ ಹೆಚ್ಚಿನ ಸಮಯ ಕುಟುಂಬಕ್ಕೆ ಮೀಸಲಿಡುವ ಕಾರಣ ಈ ನಿರ್ಧಾರ ಮಾಡಿರುವುದಾಗಿ ಅವರು ತಿಳಿಸಿದರು.
ಇವರು ದ.ಆಫ್ರಿಕ ಪರ 54 ಟೆಸ್ಟ್ ಪಂದ್ಯವನ್ನಾಡಿದ್ದು 3,300 ರನ್ ಗಳಿಸಿದ್ದಾರೆ. ಒಬ್ಬ ಉತ್ತಮ ಆಟಗಾರನಾಗಿದ್ದು ಇದೀಗ ಟೆಸ್ಟ್ ಪಂದ್ಯಕ್ಕೆ ವಿದಾಯ ಹೇಳಿದ್ದಾರೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments