ಅಂತರಾಷ್ಟ್ರೀಯ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ಅಮೋಘ ಸಾಧನೆ

Ad Code

ಅಂತರಾಷ್ಟ್ರೀಯ ಪಂದ್ಯದಲ್ಲಿ ಕೊಹ್ಲಿ ಮತ್ತೊಂದು ಅಮೋಘ ಸಾಧನೆ


ಮುಂಬೈ : ಅಂತರಾಷ್ಟ್ರೀಯ ಕ್ರಿಕೆಟ್ ನಲ್ಲಿ ಈಗಾಗಲೇ ಹಲವು ದಾಖಲೆಗಳನ್ನು ಬರೆದಿರುವ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ಸಾಧನೆಯಿಂದ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.

ನ್ಯೂಜಿಲೆಂಡ್ ವಿರುದ್ಧ ಎರಡನೇ ಟೆಸ್ಟ್ ಗೆದ್ದ ಬಳಿಕ 50 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ಆಟಗಾರ ಎಂಬ ಸಾಧನೆಯನ್ನು ಕೊಹ್ಲಿ ಮಾಡಿದ್ದಾರೆ.

ಎರಡನೇ ಟೆಸ್ಟ್ ಪಂದ್ಯದಲ್ಲಿ ಭಾರತ 372 ರನ್ ಗಳ ಭಾರೀ ಅಂತರದಲ್ಲಿ ಗೆಲುವು ಪಡೆಯಿತು. ಇದರ ಜೊತೆಗೆ ವಿರಾಟ್ ಕೊಹ್ಲಿ 50 ಪಂದ್ಯಗಳನ್ನು ಗೆದ್ದ ವಿಶ್ವದ ಮೊದಲ ಆಟಗಾರ ಎಂಬ ಕೀರ್ತಿಗೆ ಪಾತ್ರರಾದರು. 

ಇನ್ನು ಡಿಸೆಂಬರ್ 26ರಿಂದ ಭಾರತ ದಕ್ಷಿಣ ಆಫ್ರಿಕಾ ವಿರುದ್ಧ ಮೊದಲನೆ ಟೆಸ್ಟ್ ಪಂದ್ಯವಾಡಲಿದೆ. 

Post a Comment

0 Comments