ಹೊಸದಿಲ್ಲಿ: ದೇಶದ ಎಲ್ಲ ವಿಶ್ವವಿದ್ಯಾಲಯಗಳಲ್ಲಿ, ಕಾಲೇಜುಗಳಲ್ಲಿ ಖಾಲಿ ಇರುವ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳುವಂತೆ ವಿಶ್ವವಿದ್ಯಾಲಯ ಧನಸಹಾಯ ಆಯೋಗವು ಆದೇಶ ನೀಡಿದೆ.
ಯುನಿವರ್ಸಿಟಿ ಮತ್ತು ಕಾಲೇಜುಗಳಲ್ಲಿ ಅಧ್ಯಾಪಕರ ಖಾಲಿ ಹುದ್ದೆಯನ್ನು ಶೀಘ್ರವಾಗಿ ಭರ್ತಿ ಮಾಡುವಂತೆ ಮಾರ್ಗಸೂಚಿಯನ್ನು ಹೊರಡಿಸಿದೆ ಎಂದು ಯುಜಿಸಿ ಹೇಳಿದೆ.
ಉನ್ನತ ಶಿಕ್ಷಣ ಸಂಸ್ಥೆಗಳು ಕೊರತೆ ಇರುವ ಬೋಧಕ ಸಿಬ್ಬಂದಿಗಳನ್ನು ಶೀಘ್ರದಲ್ಲಿ ನೇಮಕ ಮಾಡಿಕೊಂಡು ಉತ್ತಮ ಗುಣಮಟ್ಟದ ಶಿಕ್ಷಣ ನೀಡಬೇಕು. ಅದಕ್ಕೆ ಎಲ್ಲ ವಿಶ್ವವಿದ್ಯಾಲಯಗಳಲ್ಲಿ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಯುಜಿಸಿ ತಿಳಿಸಿದೆ.
ಈ ಹಿನ್ನೆಲೆಯಲ್ಲಿ ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲ ವಿವಿಗಳು ಮತ್ತು ಕಾಲೇಜುಗಳಲ್ಲಿ ಅಗತ್ಯ ಬೋಧಕ ಹುದ್ದೆಗಳ ಭರ್ತಿಗೆ ನೇಮಕ ಅಧಿಸೂಚನೆಯು ಬಿಡುಗಡೆ ಮಾಡಿದೆ.
0 Comments