ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ

Ad Code

ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ


ಶ್ರೀನಗರ: ಜಮ್ಮ ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯ ಕಸ್ಬಾ ಯಾರ್ ಪ್ರದೇಶದಲ್ಲಿ ಭಾರತೀಯ ಸೇನೆ ಇಂದು ಬೆಳ್ಳಂಬೆಳಿಗ್ಗೆ ಭಾರೀ ಕಾರ್ಯಾಚರಣೆ ನಡೆಸಿದ್ದು ಇಬ್ಬರು ಉಗ್ರರನ್ನು ಎನ್ಕೌಂಟರ್ ನಲ್ಲಿ ಹತ್ಯೆಗೈದಿದೆ. ಜೈಷ್- ಇ- ಮೊಹಮ್ಮದ್ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರು ಎನ್ ಕೌಂಟರ್ ನಲ್ಲಿ ಹತರಾಗಿದ್ದಾರೆ ಎಂದು ತಿಳಿದುಬಂದಿದೆ. ಈ ಸಂಘಟನೆಗೆ ಸೇರಿದ ಇಬ್ಬರು ಉಗ್ರರು ಅಡಗಿ ಕುಳಿತಿರುವ ಬಗ್ಗೆ ಖಚಿತ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭಾರತೀಯ ಸೇನಾಪಡೆ ಸ್ಥಳದಲ್ಲಿ ಕಾರ್ಯಾಚರಣೆ ನಡೆಸಿತ್ತು. ಏಕಾಏಕಿ ಗುಂಡಿನ ದಾಳಿ ನಡೆಸಿ ಇಬ್ಬರು ಉಗ್ರರನ್ನು ಹತ್ಯೆಗೈದಿದ್ದಾರೆ ಎಂದು ಕಾಶ್ಮೀರ ಪೋಲೀಸರು ತಿಳಿಸಿದ್ದಾರೆ.

Post a Comment

0 Comments