ಲಾಹೋರ್: ಪಾಕಿಸ್ತಾನದ ಲಾಹೋರ್‌ನ ಲೋಹಾರಿ ಗೇಟ್ ಪ್ರದೇಶದಲ್ಲಿ ಗುರುವಾರ ಸಂಭವಿಸಿದ ಬಾಂಬ್ ಸ್ಫೋಟದಲ್ಲಿ ಕನಿಷ್ಠ ಮೂವರು ಸಾವನ್ನಪ್ಪಿದ್ದಾರೆ ಮತ್ತು 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ ಅವರಲ್ಲಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ಮತ್ತು ಆರೋಗ್ಯ ಅಧಿಕಾರಿಗಳು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.
ಘಟನೆಯ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಡಿಐಜಿ ಆಪರೇಷನ್ ಲಾಹೋರ್ ಡಾ.ಮುಹಮ್ಮದ್ ಅಬಿದ್ ಖಾನ್, ಘಟನೆಯಲ್ಲಿ 20 ಕ್ಕೂ ಅಧಿಕ ಜನರು ಗಾಯಗೊಂಡಿದ್ದಾರೆ. ತನಿಖೆ ಆರಂಭವಾಗಿದೆ.
ಇದು ಭೂಮಿಯಲ್ಲಿ ಹೂತಿಟ್ಟ ಸ್ಪೋಟಕವಾಗಿದೆ ಎಂದು ತಿಳಿಸಿದ್ದಾರೆ, ಆದರೆ ಇದು ಸುಧಾರಿತ ಸ್ಫೋಟಕವೇ (ಐಇಡಿ) ಅಥವಾ ಟೈಮ್ ಬಾಂಬ್ ಆಗಿರಬಹುದೇ ಎಂಬುದು ಇನ್ನೂ ದೃಢಪಟ್ಟಿಲ್ಲ ಎಂದಿದ್ದಾರೆ.
ಸ್ಫೋಟದ ರಭಸಕ್ಕೆ ಸಮೀಪದ ಕಟ್ಟಡಗಳ ಕಿಟಕಿ ಗಾಜುಗಳು ಒಡೆದಿದ್ದು, ಸ್ಫೋಟದ ಸ್ಥಳದ ಬಳಿ ನಿಲ್ಲಿಸಲಾಗಿದ್ದ ಹಲವಾರು ದ್ವಿಚಕ್ರವಾಹನಗಳಿಗೆ ಹಾನಿಯಾಗಿದೆ.ಬಾಂಬ್ ನಿಷ್ಕ್ರಿಯ ದಳವನ್ನು ತನಿಖೆಗಾಗಿ ಪ್ರದೇಶಕ್ಕೆ ಕಳುಹಿಸಲಾಗಿದೆ ಎಂಬ ಮಾಹಿತಿ ಅಂತರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.
ಭಯೋತ್ಪಾದನೆಗೆ ಆಸರೆಯಾಗಿರುವ ನಿಂತಿರುವ ಪಾಕಿಸ್ತಾನಕ್ಕೂ ಉಗ್ರವಾದದ ಹಿಂಸೆ ತಪ್ಪಿಲ್ಲ ಎಂಬುದು ಈ ಘಟನೆಯಿಂದ ಮತ್ತೆ ಸಾಬೀತಾಗಿದೆ.
ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments