ಹೊಸದಿಲ್ಲಿ: ಭಾರತ್ ಬಯೋಟೆಕ್‌ನ ಕೃಷ್ಣ ಎಲಾ ಮತ್ತು ಸುಚಿತ್ರಾ ಎಲಾ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸೈರಸ್ ಪೂನಾವಾಲಾ ಅವರಿಗೆ ಪದ್ಮಭೂಷಣ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಘೋಷಿಸಿದೆ.
ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರಿಗೆ ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿ ನೀಡಲಾಗುವುದು ಎಂದು 73ನೇ ಗಣರಾಜ್ಯೋತ್ಸವದ ಮುನ್ನಾದಿನದಂದು ಸರ್ಕಾರ ತಿಳಿಸಿದೆ.
ಭಾರತ್ ಬಯೋಟೆಕ್‌ನ ಕೃಷ್ಣ ಎಲಾ ಮತ್ತು ಸುಚಿತ್ರಾ ಎಲಾ ಮತ್ತು ಸೀರಮ್ ಇನ್‌ಸ್ಟಿಟ್ಯೂಟ್ ಆಫ್ ಇಂಡಿಯಾದ ಸೈರಸ್ ಪೂನಾವಾಲಾ ಪದ್ಮಭೂಷಣ ಸ್ವೀಕರಿಸಲಿದ್ದಾರೆ ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ. ಕೃಷ್ಣ ಎಲಾ ಮತ್ತು ಸುಚಿತ್ರಾ ಎಲ್ಲ ಕೋವಾಕ್ಸಿನ್ ಉಪಕ್ರಮದ ಪ್ರವರ್ತಕರಾಗಿದ್ದಾರೆ, ಪೂನಾವಾಲ್ಲಾ ಅವರು ಕೋವಿಶೀಲ್ಡ್ ಲಸಿಕೆಯನ್ನು ಭಾರತಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದಾರೆ.
ಪದ್ಮ ಪ್ರಶಸ್ತಿ ಪುರಸ್ಕೃತರ ಪೂರ್ಣ ಪಟ್ಟಿಗಾಗಿ ಈ ವಿಡಿಯೋ ನೋಡಿ:
ಒಲಿಂಪಿಕ್ ಪದಕ ವಿಜೇತ ನೀರಜ್ ಚೋಪ್ರಾ ಅವರಿಗೆ ಪದ್ಮಶ್ರೀ ನೀಡಲಾಗುವುದು ಎಂದು ಸರ್ಕಾರ ಹೇಳಿದೆ. ಚೋಪ್ರಾ ಅವರು ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಚಿನ್ನದ ಪದಕ ಗೆದ್ದ ಮೊದಲ ಟ್ರ್ಯಾಕ್ ಮತ್ತು ಫೀಲ್ಡ್ ಅಥ್ಲೀಟ್ ಆಗಿದ್ದಾರೆ.
ಹಿರಿಯ ರಾಜಕಾರಣಿ ಕಲ್ಯಾಣ್ ಸಿಂಗ್ ಅವರು ಮರಣೋತ್ತರವಾಗಿ ಪದ್ಮವಿಭೂಷಣ ಪ್ರಶಸ್ತಿಯನ್ನು ಸ್ವೀಕರಿಸಲಿದ್ದಾರೆ. ಅಲ್ಲದೆ, ದಿವಂಗತ ಕಮ್ಯುನಿಸ್ಟ್ ನಾಯಕ ಮತ್ತು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಮತ್ತು ಹಿರಿಯ ಕಾಂಗ್ರೆಸ್ ನಾಯಕ ಗುಲಾಂ ನಬಿ ಆಜಾದ್ ಅವರಿಗೆ ಪದ್ಮಭೂಷಣ ಪ್ರಶಸ್ತಿ ನೀಡಲಾಗುವುದು.
ತಂತ್ರಜ್ಞಾನ ಕ್ಷೇತ್ರದ ನಾಯಕರಾದ ಮೈಕ್ರೋಸಾಫ್ಟ್ ಸಿಇಒ ಸತ್ಯ ನಾಡೆಲ್ಲಾ ಮತ್ತು ಗೂಗಲ್‌ನ ಸುಂದರ್ ಪಿಚೈ ಅವರಿಗೆ ಪದ್ಮಭೂಷಣ ಪ್ರಶಸ್ತಿ ಘೋಷಿಸಲಾಗಿದೆ.
0 Comments