ಮಕರ ಸಂಕ್ರಾಂತಿ ವಿಶೇಷ: ಜಗತ್ತಿನಾದ್ಯಂತ 75 ಲಕ್ಷಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ಸೂರ್ಯ ನಮಸ್ಕಾರ

Ad Code

ಮಕರ ಸಂಕ್ರಾಂತಿ ವಿಶೇಷ: ಜಗತ್ತಿನಾದ್ಯಂತ 75 ಲಕ್ಷಕ್ಕೂ ಹೆಚ್ಚು ಜನರಿಂದ ಏಕಕಾಲಕ್ಕೆ ಸೂರ್ಯ ನಮಸ್ಕಾರ

 



ಹೊಸದಿಲ್ಲಿ: ಆಯುಷ್ ಸಚಿವಾಲಯವು ಇಂದು ಆಜಾದಿ ಕಾ ಅಮೃತ್ ಮಹೋತ್ಸವ ಆಚರಣೆಯ ಅಡಿಯಲ್ಲಿ ಚೈತನ್ಯಕ್ಕಾಗಿ ಜಾಗತಿಕ ಮಟ್ಟದಲ್ಲಿ ಸೂರ್ಯ ನಮಸ್ಕಾರವನ್ನು ಆಯೋಜಿಸಿತ್ತು.


ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ದೇಹ ಮತ್ತು ಮನಸ್ಸನ್ನು ಆರೋಗ್ಯವಾಗಿಡಲು ಮತ್ತು ತಮ್ಮನ್ನು ಸುರಕ್ಷಿತವಾಗಿರಿಸಲು ಭಾರತ ಸೇರಿದಂತೆ ಪ್ರಪಂಚದಾದ್ಯಂತದ 75 ಲಕ್ಷಕ್ಕೂ ಹೆಚ್ಚು ಜನರು ಒಟ್ಟಾಗಿ ಸೂರ್ಯ ನಮಸ್ಕಾರವನ್ನು ಮಾಡಿದ್ದಾರೆ ಎಂದು ಸಚಿವಾಲಯ ತಿಳಿಸಿದೆ.


ಆಯುಷ್ ಸಚಿವ ಸರ್ಬಾನಂದ ಸೋನೋವಾಲ್ ಮತ್ತು ಆಯುಷ್ ರಾಜ್ಯ ಸಚಿವ ಡಾ ಮುಂಜಾಪರ ಮಹೇಂದ್ರಭಾಯಿ ಅವರು ಕಾರ್ಯಕ್ರಮ ವರ್ಚುವಲ್‌ ಉದ್ಘಾಟನೆ ಮಾಡಿದರು. ಬಾಬಾ ರಾಮ್‌ದೇವ್, ಆಚಾರ್ಯ ಬಾಲಕೃಷ್ಣ, ಶ್ರೀ ಶ್ರೀ ರವಿಶಂಕರ್, ಸದ್ಗುರು ಜಗ್ಗಿ ವಾಸುದೇವ್ ಮತ್ತು ವಿಶ್ವದ ವಿವಿಧ ಭಾಗಗಳಿಂದ ಅನೇಕ ಪ್ರಮುಖ ವ್ಯಕ್ತಿಗಳು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡರು ಎಂದು ಸಚಿವಾಲಯ ತಿಳಿಸಿದೆ.


ಈ ಸಂದರ್ಭದಲ್ಲಿ  ಸೋನೋವಾಲ್ ಮಾತನಾಡಿ, ಜನರ ದೈಹಿಕ ಮತ್ತು ಮಾನಸಿಕ ಸ್ವಾಸ್ಥ್ಯವನ್ನು ಸುಧಾರಿಸಲು ಸೂರ್ಯ ನಮಸ್ಕಾರದ ಮೂಲಕ ಸೂರ್ಯನ ಆರಾಧನೆಯನ್ನು ಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿಯವರ ನಾಯಕತ್ವ ಮತ್ತು ಮಾರ್ಗದರ್ಶನದಲ್ಲಿ ಯೋಗ ಮತ್ತು ಸೂರ್ಯ ನಮಸ್ಕಾರವನ್ನು ಮನುಕುಲದ ಕ್ಷೇಮ ಮತ್ತು ಆರೋಗ್ಯಕ್ಕಾಗಿ ಪ್ರಚಾರ ಮಾಡಲಾಗುತ್ತಿದೆ ಎಂದು ಅವರು ಹೇಳಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments