ಲಖನೌ: ಉತ್ತರ ಪ್ರದೇಶದಲ್ಲಿ ಮೂರನೇ ಹಂತದ ವಿಧಾನಸಭೆ ಚುನಾವಣೆಗೆ ನಿನ್ನೆಯಿಂದ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಮೊದಲ ದಿನ ಒಬ್ಬ ಅಭ್ಯರ್ಥಿ ನಾಮಪತ್ರ ಸಲ್ಲಿಸಿದ್ದರು. ನಾಮಪತ್ರ ಸಲ್ಲಿಸಲು ಫೆಬ್ರವರಿ 1 ಕೊನೆಯ ದಿನವಾಗಿದೆ.
ಮೂರನೇ ಹಂತದಲ್ಲಿ ಫೆಬ್ರವರಿ 20 ರಂದು 16 ಜಿಲ್ಲೆಗಳ 59 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ. ಅವುಗಳೆಂದರೆ ಹತ್ರಾಸ್, ಕಾಸ್ಗಂಜ್, ಫಿರೋಜಾಬಾದ್, ಇಟಾಹ್, ಮೈನ್‌ಪುರಿ, ಫರೂಕಾಬಾದ್, ಕನ್ನೌಜ್, ಇಟಾವಾ, ಔರೈಯಾ, ಕಾನ್ಪುರ್ ನಗರ, ಕಾನ್ಪುರ್ ದೇಹತ್, ಜಲೌನ್, ಹಮೀರ್‌ಪುರ್, ಮಹೋಬಾ, ಝಾನ್ಸಿ ಮತ್ತು ಲಲಿತ್‌ಪುರ್.
ಇದೇ ವೇಳೆ ರಾಜ್ಯದಲ್ಲಿ ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಕೆಯೂ ನಡೆಯುತ್ತಿದೆ. ಇದುವರೆಗೆ ಒಟ್ಟು 152 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ. ನಿನ್ನೆ ತೊಂಬತ್ನಾಲ್ಕು ಅಭ್ಯರ್ಥಿಗಳು ಅರ್ಜಿ ಸಲ್ಲಿಸಿದ್ದಾರೆ. ಎರಡನೇ ಹಂತದ ಚುನಾವಣೆಗೆ ನಾಮಪತ್ರ ಸಲ್ಲಿಸಲು ಜನವರಿ 28 ಕೊನೆಯ ದಿನವಾಗಿದೆ. ಎರಡನೇ ಹಂತದಲ್ಲಿ ಫೆಬ್ರವರಿ 14 ರಂದು ಸಹರಾನ್‌ಪುರ, ಬಿಜ್ನೋರ್, ಅಮ್ರೋಹಾ, ಸಂಭಾಲ್, ಮೊರಾದಾಬಾದ್, ರಾಂಪುರ, ಬರೇಲಿ, ಬದೌನ್ ಮತ್ತು ಷಹಜಹಾನ್‌ಪುರದ 9 ಜಿಲ್ಲೆಗಳ 55 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.
0 Comments