ಗೋವಾದಲ್ಲಿ ಕಾಂಗ್ರೆಸ್ ಸರಕಾರ ಕೇವಲ ಹಗಲುಗನಸು: ಬಿಜೆಪಿ ಲೇವಡಿ

Ad Code

ಗೋವಾದಲ್ಲಿ ಕಾಂಗ್ರೆಸ್ ಸರಕಾರ ಕೇವಲ ಹಗಲುಗನಸು: ಬಿಜೆಪಿ ಲೇವಡಿ


ಪಣಜಿ: ಕಾಂಗ್ರೆಸ್ ಪಕ್ಷವು ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆದು ಸರ್ಕಾರ ರಚಿಸುವ ಹಗಲುಗನಸು ಕಾಣುವುದನ್ನು ನಿಲ್ಲಿಸುವಂತೆ ಗೋವಾ ಬಿಜೆಪಿ ಹೇಳಿದೆ. ಗೋವಾದಲ್ಲಿ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಆಡಳಿತಾರೂ ಬಿಜೆಪಿ ಸೋಲು ಅನುಭವಿಸಲಿದೆ ಎಂದು ಕಾಂಗ್ರೇಸ್ ಗೋವಾ ಪ್ರಭಾರಿ ದಿನೇಶ್ ಗುಂಡೂರಾವ್ ಹೇಳಿಕೆಯನ್ನು ಗೋವಾ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ ಕಟುವಾಗಿ ಟೀಕಿಸಿದರು.


ಪಣಜಿಯಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಸದಾನಂದ ತಾನಾವಡೆ- ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೇಸ್ ಪಕ್ಷ ಸೋಲು ಅನುಭವಿಸಲಿದೆ. ಕಾಂಗ್ರೆಸ್ ಪಕ್ಷ ಹಗಲುಗನಸು ಕಾಣುವುದನ್ನು ನಿಲ್ಲಿಸಬೇಕು, ಏಕೆಂದರೆ ಅವರ ಹೇಳಿಕೆ ಅಧಿಕಾರದ ದುರಾಸೆಯನ್ನು ತೋರಿಸುತ್ತದೆ. ನಾನು ಮೊದಲೇ ಹೇಳಿದಂತೆ ರಾಜ್ಯದಲ್ಲಿ ಭಾರಿ ಪ್ರಮಾಣದ ಮತದಾನದಿಂದ ಜನರು ಬಿಜೆಪಿಗೆ ಮತ ಹಾಕಿದ್ದಾರೆ. ಮಾರ್ಚ 10 ರಂದು ಕಾಂಗ್ರೇಸ್ ಗೆಲುವು ಸೋಲು ಸ್ಪಷ್ಟವಾಗಲಿದೆ ಎಂದು ಸದಾನಂದ ತಾನಾವಡೆ ಹೇಳಿದರು.


ರಾಜ್ಯ ಪ್ರತಿಪಕ್ಷದ ನಾಯಕ ಹಾಗೂ ಕಾಂಗ್ರೇಸ್ ಪ್ರಮುಖ ದಿಗಂಬರ್ ಕಾಮತ್ ಮತ್ತು ಗೋವಾ ಪ್ರದೇಶ ಕಾಂಗ್ರೇಸ್ ಸಮಿತಿ ಅಧ್ಯಕ್ಷ ಗಿರೀಶ್ ಚೋಡಣಕರ್ ಪ್ರಸಕ್ತ ವಿಧಾನಸಭಾ ಚುನಾವಣೆಯಲ್ಲಿ ಸೋಲುವ ಭಯದಲ್ಲಿದ್ದಾರೆ. ಚುನಾವಣೆಗೆ ಉತ್ತಮ ಪ್ರತಿಕ್ರಿಯೆ ಅಂದರೆ ಬಿಜೆಪಿ ಗೋವಾದಲ್ಲಿ ಮತ್ತೊಮ್ಮೆ ಸರ್ಕಾರ ರಚಿಸಲಿದೆ ಎಂದು ಸದಾನಂದ ತಾನಾವಡೆ ವಿಶ್ವಾಸ ವ್ಯಕ್ತಪಡಿಸಿದರು.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments