ಗೋವಾ ಚುನಾವಣೆ: 22ಕ್ಕೂ ಹೆಚ್ಚು ಸ್ಥಾನಗಳ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

Ad Code

ಗೋವಾ ಚುನಾವಣೆ: 22ಕ್ಕೂ ಹೆಚ್ಚು ಸ್ಥಾನಗಳ ಗೆಲುವಿನ ನಿರೀಕ್ಷೆಯಲ್ಲಿ ಬಿಜೆಪಿ

ಮುಖ್ಯಮಂತ್ರಿ ಪ್ರಮೋದ್ ಸಾವಂತ್‌ಗೆ ಪ್ರಧಾನಿ ಮೋದಿ ಕರೆ


ಪಣಜಿ: ಗೋವಾ ವಿಧಾನಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ರವರು ಇಂದು ಬೆಳಿಗ್ಗೆ ನನಗೆ ದೂರವಾಣಿ ಕರೆ ಮಾಡಿ ಶುಭ ಹಾರೈಸಿದ್ದಾರೆ. ಗೋವಾದಲ್ಲಿ ಬಿಜೆಪಿ 22ಕ್ಕೂ ಸ್ಥಾನಗಳನ್ನು ಗೆಲ್ಲುವ ವಿಶ್ವಾಸವಿದೆ. ಗೋವಾದಲ್ಲಿ ಬಿಜೆಪಿ ಕಳೆದ 10 ವರ್ಷಗಳಲ್ಲಿ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಿದೆ. ಇದರಿಂದಾಗಿ ರಾಜ್ಯದಲ್ಲಿ ಬಿಜೆಪಿ ಪೂರ್ಣ ಬಹುಮತ ಪಡೆಯುವುದು ಖಚಿತವಾಗಿದೆ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ವಿಶ್ವಾಸ ವ್ಯಕ್ತಪಡಿಸಿದರು.

     

ಚುನಾವಣೆಯ ನಂತರ ಉತ್ಪಲ್ ಪರೀಕರ್ ರವರೊಂದಿಗೆ ಚರ್ಚಿಸುವುದಾಗಿ ಮಾಜಿ ಸಚಿವ ಹಾಗೂ ಹಾಲಿ ಕಾಂಗ್ರೆಸ್ ಅಭ್ಯರ್ಥಿ ಮೈಕಲ್ ಲೋಬೊ ಹೇಳಿಕೆ ನೀಡಿದ್ದರು. ಈ ಕುರಿತು ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಪ್ರಮೋದ ಸಾವಂತ್- ಮೈಕಲ್ ಲೋಬೊ ಮತ್ತು ಉತ್ಪಲ್ ಪರೀಕರ್ ಇವರಿಬ್ಬರೂ ಚುನಾವಣೆಯಲ್ಲಿ ಜಯಗಳಿಸುವುದಿಲ್ಲ. ಇಷ್ಟೇ ಅಲ್ಲದೆಯೇ ಗೋವಾದಲ್ಲಿ ಬಿಜೆಪಿಗೆ ಜನಬೆಂಬಲ ಸಿಗಲಿದ್ದು ಸ್ಥಿರ ಸರ್ಕಾರ ನೀಡುತ್ತೇವೆ, ಹಾಗಾಗಿ ಲೋಬೊ ಹೇಳಿಕೆಗೆ ಅರ್ಥವಿಲ್ಲ ಎಂದು ಮುಖ್ಯಮಂತ್ರಿ ಪ್ರಮೋದ ಸಾವಂತ್ ಸ್ಪಷ್ಟಪಡಿಸಿದರು.


ಗೋವಾದ ಎಲ್ಲ ಕ್ಷೇತ್ರಗಳಲ್ಲಿಯೂ ಬಿಜೆಪಿಗೆ ಎಎಪಿ, ಟಿಎಂಸಿ, ಕಾಂಗ್ರೆಸ್ ಪಕ್ಷಗಳು ಸ್ಪರ್ಧೆಯೊಡ್ಡಿವೆ. ಕೆಲವೆಡೆ ಕಾಂಗ್ರೆಸ್ ಪಕ್ಷಕ್ಕೆ ಸಂಕಷ್ಟ ಎದುರಾಗಿದೆ ಎಂದು ಮುಖ್ಯಮಂತ್ರಿ ಸಾವಂತ್ ಹೇಳಿದರು.

ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments