ಗೋವಾದಲ್ಲಿ ಶಾಲಾ ಕಾಲೇಜು ಸೋಮವಾರದಿಂದ ಆರಂಭ

Ad Code

ಗೋವಾದಲ್ಲಿ ಶಾಲಾ ಕಾಲೇಜು ಸೋಮವಾರದಿಂದ ಆರಂಭ


ಪಣಜಿ: ಗೋವಾ ರಾಜ್ಯದಲ್ಲಿ ಕರೋನಾ ನಿರ್ಬಂಧಗಳ ಹಿನ್ನೆಲೆಯಲ್ಲಿ ಮುಚ್ಚಿದ್ದ ಶೈಕ್ಷಣಿಕ ತರಗತಿಗಳು ಸೋಮವಾರದಿಂದ ಆರಂಭಗೊಳ್ಳಲಿದೆ. ಈ ಕುರಿತ ಸುತ್ತೋಲೆಯನ್ನು ಸರ್ಕಾರ ಶುಕ್ರವಾರ ಹೊರಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ. ರಾಜ್ಯದಲ್ಲಿ ಕೋವಿಡ್ ಪರಿಸ್ಥಿತಿ ನಿಯಂತ್ರಣಕ್ಕೆ ಬಂದ ಕಾರಣ ಸರ್ಕಾರ ಈ ನಿರ್ಧಾರ ಕೈಗೊಂಡಿದೆ.


ರಾಜ್ಯದಲ್ಲಿ ಕರೋನಾ ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಎಲ್ಲ ಶಾಲಾ ತರಗತಿ ಬಂದ್ ಮಾಡುವಂತೆ ಶಿಕ್ಷಣ ಇಲಾಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರಂತೆ ರಾಜ್ಯದಲ್ಲಿ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢ ಶಿಕ್ಷಣ, ಕಾಲೇಜುಗಳನ್ನು ಬಂದ್ ಮಾಡಲಾಗಿತ್ತು. ಆನ್‍ಲೈನ್ ತರಗತಿ ಆರಂಭಿಸಲಾಗಿತ್ತು.


ಕೇಂದ್ರ ಆರೋಗ್ಯ ಇಲಾಖೆ ಕಾರ್ಯದರ್ಶಿ ರಾಜೇಶ್ ಭೂಷಣ್ ರವರು ರಾಜ್ಯಗಳು ತಮ್ಮ ತಮ್ಮ ರಾಜ್ಯಗಳ ಪರಿಸ್ಥಿತಿಯನ್ನು ಪರಿಶೀಲಿಸಿದ ನಂತರ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸೂಚಿಸಿದ್ದರು. ಆರೋಗ್ಯ ಸಚಿವಾಲಯ ಹೊರಡಿಸಿದ ಸುತ್ತೋಲೆಯಲ್ಲಿ ದೇಶಾದ್ಯಂತ ಕರೋನಾ ಪರಿಸ್ಥಿತಿ ಸುಧಾರಿಸುತ್ತಿದೆ ಮತ್ತು ಕ್ಷೀಣಿಸುತ್ತಿದೆ ಎಂದು ಹೇಳಿದೆ. ಆದ್ದರಿಂದ ನಿಯಮಗಳು ಮತ್ತು ಷರತ್ತುಗಳ ಬಗ್ಗೆ ರಾಜ್ಯ ಸರ್ಕಾರ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸೂಚಿಸಿದೆ.


ಉಪಯುಕ್ತ ನ್ಯೂಸ್ ಕುಟುಂಬ ಸೇರಲು ಇಲ್ಲಿ ಕ್ಲಿಕ್ಕಿಸಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments