ಪಣಜಿ: ಕರ್ನಾಟಕ ರಕ್ಷಣಾ ವೇದಿಕೆಯ ಆಶ್ರಯದಲ್ಲಿ ಏಪ್ರಿಲ್ 3ರಂದು ಭಾನುವಾರ ಬೆಳಿಗ್ಗೆ 9 ಗಂಟೆಗೆ ವಾಸ್ಕೊ ಎಂ.ಪಿ.ಟಿ ಸಭಾಗೃಹದಲ್ಲಿ "ಯುಗಾದಿ ಸಂಭ್ರಮ ಮತ್ತು ಮನೋರಂಜನಾ ಕಾರ್ಯಕ್ರಮ" ನಡೆಯಲಿದೆ.
ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಪ್ರವೀಣಕುಮಾರ್ ಶೆಟ್ಟಿ, ಶಾಸಕ ದಾಜಿ ಸಾಲ್ಕರ್, ಶಾಸಕ ಸಂಕಲ್ಪ ಅಮೋಣಕರ್, ಉಪಸ್ಥಿತರಿರುವರು. ಕಾರ್ಯಕ್ರಮದಲ್ಲಿ ಗೋವಾದ ವಿವಿಧ ಕನ್ನಡ ಸಂಘಟನೆಗಳ ಪದಾಧಿಕಾರಿಗಳು ಉಪಸ್ಥಿತರಿರುವರು.
ಸಭಾ ಕಾರ್ಯಕ್ರಮದ ನಂತರ ಜೂ. ಉಪೇಂದ್ರ ತಂಡದಿಂದ ಮನೋರಂಜನಾ ಕಾರ್ಯಕ್ರಮ ನಡೆಯಲಿದೆ. ಈ ಎಲ್ಲ ಕಾರ್ಯಕ್ರಮಗಳಿಗೆ ಕನ್ನಡಿಗರು ಹೆಚ್ಚಿನ ನಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಕರ್ನಾಟಕ ರಕ್ಷಣಾ ವೇದಿಕೆಯ ಗೋವಾ ರಾಜ್ಯಾಧ್ಯಕ್ಷ ಮಂಜುನಾಥ ನಾಟಿಕರ್ ಪ್ರಕಟಣೆಯಲ್ಲಿ ಕೋರಿದ್ದಾರೆ.
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
0 Comments