ಗೋವಾ: ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮೋದ ಸಾವಂತ್ ಪ್ರಮಾಣವಚನ ಸ್ವೀಕಾರ

Ad Code

ಗೋವಾ: ಎರಡನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮೋದ ಸಾವಂತ್ ಪ್ರಮಾಣವಚನ ಸ್ವೀಕಾರ

ಪ್ರಧಾನಿ ಮೋದಿ ಮತ್ತು 7 ರಾಜ್ಯಗಳ ಮುಖ್ಯಮಂತ್ರಿಗಳ ಉಪಸ್ಥಿತಿ

ಸಾವಂತ್ ಜತೆಗೆ 8 ಜನ ಕ್ಯಾಬಿನೆಟ್ ಸಚಿವರ ಪ್ರಮಾಣ


ವರದಿ: ಪ್ರಕಾಶ್ ಭಟ್‌

ಪಣಜಿ: ಗೋವಾದಲ್ಲಿ ಮುಖ್ಯಮಂತ್ರಿ ಪ್ರಮೋದ ಸಾವಂತ್ ತಮ್ಮ ಎರಡನೇಯ ಅವಧಿಗೆ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ರಾಜ್ಯಪಾಲ ಪಿ.ಎಸ್.ಶ್ರೀಧರನ್ ಪಿಳ್ಳೆ ರವರು ಮುಖ್ಯಮಂತ್ರಿ ಸಾವಂತ್ ಸೇರಿದಂತೆ ಎಂಟು ಜನ ಕ್ಯಾಬಿನೆಟ್ ಸಚಿವರಿಗೆ ಪ್ರಮಾಣವಚನ ಬೋಧಿಸಿದರು.


ಸಚಿವರ ಪಟ್ಟಿಯಲ್ಲಿ ವಾಳಪೈ ಶಾಸಕ ವಿಶ್ವಜಿತ್ ರಾಣೆ ಅಗ್ರಸ್ಥಾನದಲ್ಲಿದ್ದಾರೆ. ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ 7 ರಾಜ್ಯಗಳ ಮುಖ್ಯಮಂತ್ರಿಗಳು ಪಾಲ್ಗೊಂಡಿದ್ದರು. ಗೋವಾ ಇತಿಹಾಸದಲ್ಲಿ ಮುಖ್ಯಮಂತ್ರಿಗಳ ಪ್ರಮಾಣವಚನ ಸಮಾರಂಭದಲ್ಲಿ ಪ್ರಧಾನಿಗಳು ಭಾಗವಹಿಸಿದ್ದು ಇದೇ ಮೊದಲು ಎನ್ನಲಾಗಿದೆ.


ಪ್ರಮಾಣವಚನ ಸಮಾರಂಭಕ್ಕೂ ಮುನ್ನ ಕ್ಯಾಬಿನೆಟ್ ಸಚಿವರ ಪಟ್ಟಿಯನ್ನು ಮುಖ್ಯಮಂತ್ರಿ ಸಾವಂತ್ ರವರು ರಾಜ್ಯಪಾಲರಿಗೆ ಸಲ್ಲಿಸಿದರು. ಆದರೆ ಪ್ರಮುಖ ವಿಷಯವೆಂದರೆ ಎಂಜಿಪಿ ಪಕ್ಷದ ಸುದೀನ ಧವಳೀಕರ್ ಮತ್ತು ಪಕ್ಷೇತರ ಶಾಸಕ ಅಲೆಕ್ಸ ರೆಜಿನಾಲ್ಡ ರವರ ಹೆಸರು ಕ್ಯಾಬಿನೆಟ್ ಸಚಿವರ ಪಟ್ಟಿಯಿಂದ ತೆಗೆದುಹಾಕಿರುವುದು ಹಲವು ಪ್ರಶ್ನೆಗಳಿಗೆ ಎಡೆಮಾಡಿಕೊಟ್ಟಿದೆ. ಧವಳೀಕರ್ ರವರಿಗೆ ಕ್ಯಾಬಿನೆಟ್ ಸ್ಥಾನ ನೀಡಲು ಬಿಜೆಪಿಯಲ್ಲಿ ವಿರೋಧ ವ್ಯಕ್ತವಾಗುತ್ತಿದ್ದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಕೈಬಿಟ್ಟಿರುವ ಸಾಧ್ಯತೆಯಿದೆ. ಗೋವಾ ಬಿಜೆಪಿ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ನೀಡದಿರುವುದು ಕೂಡ ಇದೀಗ ಚರ್ಚೆಗೆ ಕಾರಣವಾಗಿದೆ.


ಪ್ರಸಕ್ತ ಗೋವಾ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದಲ್ಲಿನ 40 ಸ್ಥಾನಗಳ ಪೈಕಿ 20 ಸ್ಥಾನಗಳಲ್ಲಿ ಜಯಗಳಿಸಿತ್ತು. ಸರ್ಕಾರ ರಚನೆಗೆ ಬಿಜೆಪಿಯು 3 ಪಕ್ಷೇತರ ಶಾಸಕರು ಮತ್ತು ಎಂಜಿಪಿ ಪಕ್ಷದ 2 ಶಾಸಕರ ಬೆಂಬಲ ಪಡೆದುಕೊಂಡಿದೆ. ಗೋವಾ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟಗೊಂಡ 18 ದಿನಗಳ ಬಳಿಕ ಪ್ರಮಾಣವಚನ ಸ್ವೀಕಾರ ಸಮಾರಂಭ ನಡೆದಿದೆ. 


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


hit counter

Post a Comment

0 Comments