ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ಅಧ್ಯಕ್ಷರಾಗಿ ದಿಲೀಪ ಲಕ್ಷ್ಮಣ ಭಜಂತ್ರಿ ನೇಮಕ

Ad Code

ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ಅಧ್ಯಕ್ಷರಾಗಿ ದಿಲೀಪ ಲಕ್ಷ್ಮಣ ಭಜಂತ್ರಿ ನೇಮಕ


ಪಣಜಿ: ಮಕ್ಕಳ ಸಾಹಿತ್ಯ ಪರಿಷತ್ತಿನ ಉದ್ದೇಶವನ್ನು ಪಾಲಿಸಿಕೊಂಡು ಗೋವಾ ರಾಜ್ಯಾದ್ಯಂತ ಮಕ್ಕಳಲ್ಲಿ ಸಾಹಿತ್ಯಾಭಿರುಚಿ, ಸೃಜನಶೀಲ ಬರವಣಿಗೆ, ಪರಿಸರ ಸಂರಕ್ಷಣೆ ಸಹಬಾಳ್ವೆ ಹಾಗೂ ದೇಶಾಭಿಮಾನವನ್ನು ಬೆಳೆಸುವ ನಿಟ್ಟಿನಲ್ಲಿ ದಿಲೀಪ ಲಕ್ಷ್ಮಣ ಭಜಂತ್ರಿ ರವರನ್ನು ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್ ಗೋವಾ ಘಟಕಕ್ಕೆ ಅಧ್ಯಕ್ಷರನ್ನಾಗಿ ನೇಮಕ ಮಾಡಲಾಗಿದೆ. ಈ ಕುರಿತು ಮಕ್ಕಳ ಸಾಹಿತ್ಯ ಪರಿಷತ್ ಕರ್ನಾಟಕ ರಾಜ್ಯಾಧ್ಯಕ್ಷ ಸಿ.ಎನ್ ಅಶೋಕ ಅಧೀಕೃತ ಆದೇಶ ಹೊರಡಿಸಿದ್ದಾರೆ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಮಾಹಿತಿ ನೀಡಿದರು.


ಗೋವಾ ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ರವರ ಮಾರ್ಗದರ್ಶನದಲ್ಲಿ ಗೋವಾ ರಾಜ್ಯದಲ್ಲಿ ದಿಲೀಪ ಭಜಂತ್ರಿ ರವರನ್ನು ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಗಿತ್ತು.


ವಾಸ್ಕೊದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಸಾಹಿತ್ಯ ಪರಿಷತ್ ಅಧ್ಯಕ್ಷ ಸಿದ್ಧಣ್ಣ ಮೇಟಿ ಹಾಗೂ ಗೌರವಾಧ್ಯಕ್ಷ ನಾಗರಾಜ ಗೊಂದಕರ್ ಉಪಸ್ಥಿತರಿದ್ದು ದಿಲೀಪ ಭಜಂತ್ರಿ ರವರನ್ನು ಮಕ್ಕಳ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ನಂತರ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷರಾದ ಸಿದ್ಧಣ್ಣ ಮೇಟಿಯವರನ್ನು ಕನ್ನಡ ಸಂಘಟನೆಯ ಪರವಾಗಿ ಸನ್ಮಾನಿಸಲಾಯಿತು.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ


Post a Comment

0 Comments