ಗೋವಾ ರಾಜ್ಯ ಶ್ರಮಿಕ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ರಾಜತಿಲಕ್ ನಾಯ್ಕ ಅವಿರೋಧವಾಗಿ ಆಯ್ಕೆ

Ad Code

ಗೋವಾ ರಾಜ್ಯ ಶ್ರಮಿಕ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ರಾಜತಿಲಕ್ ನಾಯ್ಕ ಅವಿರೋಧವಾಗಿ ಆಯ್ಕೆ


ಪಣಜಿ: ಗೋವಾ ರಾಜ್ಯ ಶ್ರಮಿಕ ಪತ್ರಕರ್ತ ಸಂಘದ ಅಧ್ಯಕ್ಷರಾಗಿ ಪತ್ರಿಕಾ ಛಾಯಾಗ್ರಾಹಕ ರಾಜತಿಲಕ್ ನಾಯ್ಕ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಪತ್ರಕರ್ತರ ಸಂಘಕ್ಕೆ ಎರಡನೇಯ ಅವಧಿಗೆ ಆಯ್ಕೆಯಾಗಿರುವ ರಾಜತಿಲಕ್ ನಾಯ್ಕ ರವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿನಂದಿಸಿದ್ದಾರೆ.


ಗೋವಾ ರಾಜ್ಯ ಶೃಮಿಕ ಪತ್ರಕರ್ತರ ಸಂಘದ ಪದಾಧಿಕಾರಿಗಳ ಮೂರು ವರ್ಷಗಳ ಅಧಿಕಾರಾವಧಿಯು ಪೂರ್ಣಗೊಂಡ ಹಿನ್ನೆಲೆಯಲ್ಲಿ ಜೂನ್ 18 ರಂದು ಚುನಾವಣೆ ನಡೆಯಲಿದೆ. ಗೋವಾ ರಾಜ್ಯ ಶೃಮಿಕ ಪತ್ರಕರ್ತರ ಸಂಘದ ಚುನಾವಣೆಗೆ ಅಧ್ಯಕ್ಷ ಸ್ಥಾನಕ್ಕೆ ಹಾಲಿ ಅಧ್ಯಕ್ಷರಾಗಿರುವ ರಾಜತಿಲಕ್ ನಾಯ್ಕ ರವರು ಮಾತ್ರ ನಾಮಪತ್ರ ಸಲ್ಲಿಸಿದ್ದರು. ಜೂನ್ 9 ರಂದು ನಾಮಪತ್ರ ಹಿಂಪಡೆಯಲು ಕೊನೇಯ ದಿನವಾಗಿತ್ತು. ಆದರೆ ಇದುವರೆಗೂ ಅಧ್ಯಕ್ಷ ಸ್ಥಾನಕ್ಕೆ ಯಾರೂ ಪ್ರತಿಸ್ಪರ್ಧಿ ಇಲ್ಲದ ಕಾರಣ ರಾಜತಿಲಕ್ ನಾಯ್ಕ ರವರು ಅವಿರೋಧವಾಗಿ ಎರಡನೇಯ ಅವಧಿಗೆ ಆಯ್ಕೆಯಾಗಿದ್ದಾರೆ.


ರಾಜ್‍ತಿಲಕ್ ನಾಯ್ಕ ರವರು ಎರಡನೇಯ ಅವಧಿಗೆ ಅವಿರೋಧವಾಗಿ ಆಯ್ಕೆಯಾಗಿರುವ ರಾಜತಿಲಕ್ ನಾಯ್ಕ ರವರನ್ನು ಗೋವಾ ಮುಖ್ಯಮಂತ್ರಿ ಪ್ರಮೋದ ಸಾವಂತ್ ಅಭಿನಂದನೆ ಸಲ್ಲಿಸಿದ್ದು, ಈ ಸುದ್ಧಿಯನ್ನು ಮುಖ್ಯಮಂತ್ರಿಗಳು ತಮ್ಮ ಟ್ವೀಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.


ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ

Post a Comment

0 Comments