ಪಣಜಿ: ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ರವರು ಭಾರತ ದೇಶಕ್ಕೆ ಕೊಟ್ಟುಗೆ ಅಪಾರವಾದದ್ದು, ಅವರು ಮುಂಬರುವ ಪೀಳಿಗೆಗೂ ಕೂಡ ಮಾರ್ಗದರ್ಶಕರಾಗಿದ್ದಾರೆ. ನಮ್ಮ ದೇಶದಲ್ಲಿ ಅವರು ನಿರ್ಮಿಸಿದ ಅಣೇಕಟ್ಟು, ಕಟ್ಟಡಗಳು ಇಂದಿಗೂ ಕೂಡ ಸವಾಲಾಗಿಯೇ ಉಳಿಸಿದೆ. ಇಂದು ನಾವು ಗೋವಾದಲ್ಲೀ ಶ್ರೀ ವಿಶ್ವೇಶ್ವರಯ್ಯ ರವರ ಜನ್ಮ ದಿನವನ್ನು ಆಚರಿಸುತ್ತಿರುವುದು ನಮಗೆಲ್ಲ ಹೆಮ್ಮೆಯ ಸಂಗತಿ ಎಂದು ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯಾಧ್ಯಕ್ಷ ಸಿದ್ಧಣ್ಣ ಮೇಟಿ ಹೇಳಿದರು.
ಗೋವಾದ ವಾಸ್ಕೊದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ವತಿಯಿಂದ ಭಾನುವಾರ ಆಯೋಜಿಸಿದ್ದ ಭಾರತ ರತ್ನ ಸರ್.ಎಂ ವಿಶ್ವೇಶ್ವರಯ್ಯ ರವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉಧ್ಘಾಟನೆ ನೆರವೇರಿಸಿ ಅವರು ಮಾತನಾಡುತ್ತಿದ್ದರು.
ಗೋವಾದಲ್ಲಿ ಕನ್ನಡ ಸಾಹಿತ್ಯ ಪರಿಷತ್ ಸದಸ್ಯತ್ವ ಅಭಿಯಾನವನ್ನು ಆರಂಭಿಸಲಾಗುತ್ತಿದೆ. ಗೋವಾದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್‍ಗೆ ಕನ್ನಡಿಗರು ಸದಸ್ಯರಾಗಬೇಕು ಎಂದು ಸಿದ್ಧಣ್ಣ ಮೇಟಿ ಕರೆ ನೀಡಿದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ಕನ್ನಡ ಸಾಹಿತ್ಯ ಪರಿಷತ್ ಗೋವಾ ರಾಜ್ಯ ಘಟಕದ ಗೌರವ ಕೋಶಾಧ್ಯಕ್ಷ ಪುಟ್ಟಸ್ವಾಮಿ ಗುಡಿಗಾರ ಮಾತನಾಡಿ- ಕನ್ನಡ ಶ್ರೀಮಂತ ಭಾಷೆ, 8 ಜ್ಞಾನಪೀಠ ಪ್ರಶಸ್ತಿ ಪಡೆದ ಭಾಷೆ. ಹಿಂದಿ ಭಾಷೆಗಿಂತಲೂ ಕನ್ನಡಕ್ಕೆ ಹೆಚ್ಚು ಜ್ಞಾನಪೀಠ ಪ್ರಶಸ್ತಿ ಬಂದಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ತಿನ ಗೋವಾ ರಾಜ್ಯಘಟಕದ ಮಹಿಳಾ ಪ್ರತಿನಿಧಿ ಕಾಂಚನಾ ಜೋಶಿ ಮಾತನಾಡಿ- ಮೊದಲನೇಯದಾಗಿ ಜ್ಞಾನಪೀಠ ಪ್ರಶಸ್ತಿ ಪಡೆದ ಮೊದಲಿಗರು ಎಂದರೆ ಸರ್ ಎಂ ವಿಶ್ವೇಶ್ವರಯ್ಯ ರವರು. ಕನ್ನಂಬಾಡಿ ಅಣೇಕಟ್ಟಿಗೆ ಅವರು ತಮ್ಮ ಹೆಸರನ್ನು ಹಾಕದೆಯೇ ನಮ್ಮ ಭಾರತದ ಹೆಸರನ್ನು ಇಟ್ಟರು. ಇಂತಹ ಇಂಜಿನೀಯರ್ ನಮಗೆ ಇಂದು ಬೇಕು ಎಂದರು.
ಈ ಸಂದರ್ಭದಲ್ಲಿ ಉಪಸ್ಥಿತರಿದ್ದ ವಿಜಯಪುರ ಜಿ.ಪಂ ಮಾಜಿ ಅಧ್ಯಕ್ಷೆ ನೀಲಮ್ಮ ಮೇಟಿ, ಕನ್ನಡ ಸಾಹಿತ್ಯ ಪರಿಷತ್ ಗೌ.ಕಾರ್ಯದರ್ಶಿ ನಾಗರಾಜ ಗೋಂದಕರ್, ಪ್ರಕಾಶ್ ಭಟ್, ಪರಿಶಿಷ್ಠ ಜಾತಿ ಪ್ರತಿನಿಧಿ ತವರಪ್ಪ ಲಮಾಣಿ, ಶ್ರೀಶೈಲ ಛಲವಾದಿ ಉಪಸ್ಥಿತರಿದ್ದು ಮಾತನಾಡಿದರು. ಕನ್ನಡ ಸಾಹಿತ್ಯ ಪರಿಷತ್ ಗೌ. ಕಾರ್ಯದರ್ಶಿ ನಾಗರಾಜ ಗೋಂದಕರ್ ಕಾರ್ಯಕ್ರಮಕ್ಕೆ ಸ್ವಾಗತ ಕೋರಿ ಕೊನೆಯಲ್ಲಿ ವಂದನಾರ್ಪಣೆಗೈದರು.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
0 Comments