ಪಣಜಿ: ಕನ್ನಡ ಸಾಹಿತ್ಯ ಪರಿಷತ್ತು ಗೋವಾ ರಾಜ್ಯ, ದಕ್ಷಿಣ ಗೋವಾ ಜಿಲ್ಲಾ ಮತ್ತು ಸಾಲಸೇಟ್ ತಾಲೂಕಾ ಘಟಕ ಇವರ ಆಶ್ರಯದಲ್ಲಿ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಹಾಗೂ ನೂತನ ಸದಸ್ಯತ್ವ ಅಭಿಯಾನವನ್ನು ಅಕ್ಟೋಬರ್ 23 ರಂದು ಭಾನುವಾರ ಬೆಳಿಗ್ಗೆ 10.30 ಗಂಟೆಗೆ ಮಡಗಾಂವ ಕ್ರಿಕೇಟ್ ಕ್ಲಬ್ ಎನ್‍ಸಿಸಿ ಹಾಲ್‍ನಲ್ಲಿ ಆಯೋಜಿಸಲಾಗಿದೆ.
ಬೆಳಗಾವು ಹುಕ್ಕೇರಿಯ ಶ್ರೀ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಲಿದ್ದಾರೆ. ಅಥಣಿಯ ಶ್ರೀ ಆತ್ಮಾರಾಮ ಸ್ವಾಮೀಜಿ ಉಪಸ್ಥಿತರಿರುವರು. ಕಸಾಪ ಕರ್ನಾಟಕ ರಾಜ್ಯಾಧ್ಯಕ್ಷ ಮಾಡೋಜ ಡಾ. ಮಹೇಶ್ ಜೋಶಿ ಮುಖ್ಯ ಅತಿಥಿಗಳಾಗಿ ಉಪಸ್ಥಿತರಿರುವರು. ಕಸಾಪ ಗೋವಾ ರಾಜ್ಯಾಧ್ಯಕ್ಷ ಡಾ.ಸಿದ್ಧಣ್ಣ ಮೇಟಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಮಾಜಿ ಮುಖ್ಯಮಂತ್ರಿ ದಿಗಂಬರ್ ಕಾಮತ್, ನಾವೆಲಿಂ ಶಾಸಕ ಉಲ್ಲಾಸ ತುವೇಕರ್, ಕರ್ನಾಟಕ ಜನಜಾಗೃತಿ ವೇದಿಕೆಯ ಅಧ್ಯಕ್ಷ ಮಹೇಶಬಾಬು ಸುರ್ವೆ, ಮತ್ತಿತರರು ಉಪಸ್ಥಿತರಿರುವರು. ಸಭಾ ಕಾರ್ಯಕ್ರಮದ ನಂತರ ಸಂಗೀತ ಶಿಕ್ಷಕ ಬಾಬು ಬೂಸಾರಿ ಮತ್ತು ಬಾಬಾಸಾಬ ಕುದಾವಂದ ರವರಿಂದ ಸಂಗೀತ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮಕ್ಕೆ ಕನ್ನಡಿಗರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕು ಎಂದು ಕಸಾಪ ದಕ್ಷಿಣ ಗೋವಾ ಜಿಲ್ಲಾ ಘಟಕದ ಅಧ್ಯಕ್ಷ ಪರಶುರಾಮ ಕಲಿವಾಳ ಮತ್ತು ಗೌರವಾಧ್ಯಕ್ಷ ಪಡದಯ್ಯಸ್ವಾಮಿ ಹಿರೇಮಠ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್‌ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪಿಗೆ ಸೇರಲು ಈ ಲಿಂಕ್ ಕ್ಲಿಕ್ ಮಾಡಿ
0 Comments